spot_img
Wednesday, April 1, 2026
spot_img

ಮುಡಾ ಆಯ್ತು ಈಗ ಬೇನಾಮಿ ಆಸ್ತಿ !? : ಸಿಎಂ ಸಿದ್ದರಾಮಯ್ಯ ಅವರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ !

ಜನಪ್ರತಿನಿಧಿ (ಬೆಂಗಳೂರು) : ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಲೋಕಾಯಕ್ತ ಮಾಡಿದೆ. ಅಲ್ಲದೇ ಈ ಪ್ರಕರಣದಲ್ಲಿ ಇಡಿ ಕೂಡ ಪ್ರವೇಶಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ.

ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರೇ ಬೇನಾಮಿ ಆಸ್ತಿ ಹೊಂದಿರುವ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ಅವರು ದೂರು ಸಲ್ಲಿಸಿದ್ದಾರೆ.

ಬೇನಾಮಿ ಆಸ್ತಿ ಸಂಬಂಧ ಸ್ನೇಹಯಿ ಕೃಷ್ಣ ದಾಖಲೆ ಸಹಿತ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮೈಸೂರು ತಾಲೂಕು ಆಲನಹಳ್ಳಿ ಗ್ರಾಮದ ಸರ್ವೆ ನಂ 113/4ರಲ್ಲಿ 1 ಎಕರೆ ಭೂಮಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 1983ರ ಡಿಸೆಂಬರ್ 15 ರಂದು ಆಲನಹಳ್ಳಿಯ ಹನುಮೇಗೌಡ, ಹನುಮಯ್ಯ, ಕರಿಯಪ್ಪ ಹಾಗೂ ಕೆಂಪಮ್ಮ ಎಂಬುವರಿಂದ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಭೂಮಿ ಖರೀದಿ ಮಾಡಿದ್ದಾರೆ.

1996ರಲ್ಲಿ ಅಂತಿಮ ಅಧಿಸೂಚನೆ‌ ಆಗಿರುವ ಭೂಮಿಯನ್ನು ಮಲ್ಲಿಕಾರ್ಜುನ ಸ್ವಾಮಿ ಡಿನೋಟಿಫೈ ಮಾಡಿಸಿದ್ದು, 2006 ರಲ್ಲಿ ಮಲ್ಲಿಕಾರ್ಜುನಸ್ವಾಮಿಯಿಂದ ಕೃಷಿ ಭೂಮಿಯನ್ನು ಅನ್ಯಕ್ರಾಂತ ಮಾಡಿಸಿ ಆದೇಶ ಹೊರಡಿಸಲಾಗಿದೆ. ಅದೇ ಭೂಮಿಯನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ 2010 ಅಕ್ಟೋಬರ್ 20ರಲ್ಲಿ ದಾನ ಮಾಡಿದ್ದಾರೆ. ಪಾರ್ವತಿ ಕೂಡ 2010ರ ನವೆಂಬರ್ 11ರಂದು ತಮ್ಮ‌ ಮಗ ಯತೀಂದ್ರ ಸಿದ್ದರಾಮಯ್ಯಗೆ ದಾನ ಮಾಡಿದ್ದಾರೆ. ತಮ್ಮ ಹೆಸರಿಗೆ ಭೂಮಿ ಬಂದ ಒಂದೇ ತಿಂಗಳಲ್ಲಿ ದಾನ ಮಾಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ತಮಗೆ ಬಂದ ಭೂಮಿಯನ್ನ 2011ರ ಮಾರ್ಚ್ 23 ರಂದು ಬೇರೆಯವರಿಗೆ ಮಾರಾಟ ಮಾಡಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!