spot_img
Tuesday, March 31, 2026
spot_img

ಭಾರತೀಯ ಅಂಚೆ ಇಲಾಖೆಯಲ್ಲಿ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಉದ್ಯೋಗವಕಾಶ : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಮಾಹಿತಿ) : ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡವರು ಉದ್ಯೋಗಕ್ಕಾಗಿ ಅರಸುತ್ತಿದ್ದರೇ, ಅಂತವರಿಗೆ ಇಲ್ಲೊಂದು ಸುವರ್ಣ ಅವಕಾಶವಿದೆ. ಭಾರತೀಯ ಅಂಚೆ ಇಲಾಖೆ ಒಟ್ಟು 25 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆಬ್ರವರಿ 8 ಆಗಿದೆ.

ಭಾರತೀಯ ಅಂಚೆ ಇಲಾಖೆ ಹೊರಡಿಸುವ ನೇಮಕಾತಿಯಲ್ಲಿ ಒಟ್ಟು 25 ಖಾಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಮಧ್ಯ ಪ್ರದೇಶದಲ್ಲಿ 1 ಹುದ್ದೆ, ಎಂಎಂಎಸ್ ಚೆನ್ನೈನಲ್ಲಿ 15 ಹುದ್ದೆಗಳು, ದಕ್ಷಿಣ ಪ್ರದೇಶದಲ್ಲಿ 4 ಹುದ್ದೆಗಳು ಮತ್ತು ಪಶ್ಚಿಮ ಪ್ರದೇಶದಲ್ಲಿ 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅರ್ಹತೆ :

ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಅಭ್ಯರ್ಥಿಯು ಚಾಲನಾ ಪರವಾನಗಿಯನ್ನು ಹೊಂದಿರಬೇಕು ಮತ್ತು ಕನಿಷ್ಠ ಮೂರು ವರ್ಷಗಳ ಚಾಲನಾ ಅನುಭವವನ್ನು ಹೊಂದಿರಬೇಕು.

ವಯಸ್ಸಿನ ಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷಗಳನ್ನು ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ, ಅಂದರೆ ಫೆಬ್ರವರಿ 8.

ವೇತನ ಎಷ್ಟು ?

ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7ನೇ ಕೇಂದ್ರ ವೇತನ ಆಯೋಗದ (ಸಿಪಿಸಿ) ಪ್ರಕಾರ ಲೆವೆಲ್ 2 ವೇತನ ಶ್ರೇಣಿಯಲ್ಲಿ ತಿಂಗಳಿಗೆ 19,900 ರೂ. ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಗಾಗಿ ಅಭ್ಯರ್ಥಿಗಳು ಯಾವುದೇ ರೀತಿಯ ಲಿಖಿತ ಪರೀಕ್ಷೆಗೆ ಹಾಜರಾಗಬೇಕಾಗಿಲ್ಲ. ಆಯ್ಕೆಯು ಅರ್ಹತೆಯ ಪಟ್ಟಿ ಅಥವಾ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ಅರ್ಜಿ ನಮೂನೆಯನ್ನು ಕಳುಹಿಸಬೇಕಾದ ವಿವರ:

ಅಭ್ಯರ್ಥಿಗಳು ತಮ್ಮ ಸಂಪೂರ್ಣ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ದಿ ಸೀನಿಯರ್ ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ನಂ. ಗೆ ಕಳುಹಿಸಬೇಕು. ವಿಳಾಸ: 37, ಗ್ರೀಮ್ಸ್ ರಸ್ತೆ, ಚೆನ್ನೈ – 600 006. ಅರ್ಜಿ ನಮೂನೆಯು ಕೊನೆಯ ದಿನಾಂಕದೊಳಗೆ ತಲುಪದಿದ್ದರೆ ಅಭ್ಯರ್ಥಿಯ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!