spot_img
Tuesday, March 31, 2026
spot_img

ದೆಹಲಿ ಚುನಾವಣೆ : ಮುರ್ಮು, ಅತಿಶಿ ಮತದಾನ | ರಂಗೇರಿದ ರಾಷ್ಟ್ರ ರಾಜಧಾನಿ ಚುನಾವಣಾ ಕಣ

ಜನಪ್ರತಿನಿಧಿ (ನವದೆಹಲಿ) : ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಈವರೆಗೆ ಶೇ.10.95ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರ ರಾಜಧಾನಿಯಲ್ಲಿ ಇಂದು(ಬುಧವಾರ) 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳ್ಳಂಬೆಳಗ್ಗೆ ತೀವ್ರ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ.

ಲೋಕಸಭೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಇದರಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್, ಆಪ್‌ ನಾಯಕ ಮನೀಶ್‌ ಸಿಸೋಡಿಯಾ, ಸೇರಿದಂತೆ ಅನೇಕ ನಾಯಕರು ಮತ ಚಲಾಯಿಸಿದ್ದಾರೆ.

ದೆಹಲಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6:30 ಗಂಟೆವರೆಗೂ ನಡೆಯಲಿದೆ. 1.56 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬೀಳಲಿದೆ.

ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!