spot_img
Wednesday, April 1, 2026
spot_img

ಇನ್ವೆಸ್ಟ್‌ ಕರ್ನಾಟಕ : ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ : ಡಿ. ಕೆ. ಶಿವಕುಮಾರ್‌

ಜನಪ್ರತಿನಿಧಿ (ಬೆಂಗಳೂರು) : ಫೆಬ್ರವರಿ 12 ರಿಂದ 14ರ ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದೆ.

ಈ ಸಲುವಾಗಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್‌ ನೇತೃತ್ವದ ನಿಯೋಗವು 16 ದೇಶಗಳ ಪ್ರಮುಖರನ್ನು ಭೇಟಿಯಾಗಿ ಸಮಾವೇಶಕ್ಕೆ ಆಹ್ವಾನಿಸಿದ್ದಾರೆ. ಸಮಾವೇಶದ ಉದ್ಘಾಟನೆ ಬಳಿಕ ಹಲವು ಪ್ರಮುಖ ಕಂಪನಿಗಳು ಬಂಡವಾಳ ಹೂಡಿಕೆಯ ಒಪ್ಪಂದಕ್ಕೆ ಸಹಿ ಹಾಕಲಿವೆ.

ಈ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 18 ದೇಶಗಳ ಸುಮಾರು 2,000 ಹೂಡಿಕೆದಾರರು ಭಾಗಿಯಾಗಲಿದ್ದಾರೆ. ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಈ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌, ಫೆಬ್ರವರಿ 12 ರಿಂದ ಆರಂಭವಾಗುವ ʼಇನ್ವೆಸ್ಟ್‌ ಕರ್ನಾಟಕ 2025ʼ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ. ಫೆಬ್ರವರಿ 11ರ ಸಂಜೆಯೇ ಸಮಾವೇಶ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

18 ದೇಶಗಳ ಸುಮಾರು 2,000 ಹೂಡಿಕೆದಾರರು ಭಾಗಿಯಾಗಲು ನೋಂದಣಿ ಮಾಡಿಕೊಂಡಿದ್ದಾರೆ. ವಿವಿಧ ದೇಶಗಳ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಲಿದ್ದಾರೆ. 9 ದೇಶಗಳು ತಮ್ಮ‌ ಪೆವಿಲಿಯನ್‌ಗಳನ್ನು ತೆರೆಯಲು ಮುಂದೆ ಬಂದಿವೆ. 10 ದೇಶಗಳ ಉನ್ನತಮಟ್ಟದ ಕೈಗಾರಿಕಾ ವಲಯದ ನಾಯಕರು ತಾಂತ್ರಿಕ ವಲಯದ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!