spot_img
Tuesday, March 31, 2026
spot_img

ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ | ಪಕ್ಷದ ಗೊಂದಲ ಶೀಘ್ರದಲ್ಲೇ ಇತ್ಯರ್ಥ : ಆರ್‌ ಅಶೋಕ್‌ ವಿಶ್ವಾಸ

ಜನಪ್ರತಿನಿಧಿ (ಬೆಂಗಳೂರು) : ವಿರೋಧಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಹಿರಿಯರು ನೀಡಿದ ವಿರೋಧ ಪಕ್ಷದ ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ.  ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆ ಬಗ್ಗೆ ಯೋಚಿಸಿಯೂ ಇಲ್ಲ. ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಸಮಸ್ಯೆ ಆಗಿರುವುದು ನನಗೂ ನೋವಿದೆ. ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಿತ್ತು ಎಂದು ಅವರು ವರದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಬಗ್ಗೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲಾ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. ಕರ್ನಾಟಕದಲ್ಲಿ ಒಂದೇ ಕಡೆ ಬದಲಾವಣೆ ಆಗುತ್ತಿಲ್ಲ. ಇಡೀ ದೇಶದಲ್ಲಿ ಎಲ್ಲಾ ಕಡೆ ಪಕ್ಷದಲ್ಲಿ ಚುನಾವಣೆ ನಡೆಯುತ್ತಿದೆ. ಇಲ್ಲಿ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಹೇಳಿದರು.

ಪಕ್ಷದಲ್ಲಿ ಒಬ್ಬರು ಮತ್ತೊಬ್ಬರ ಮೇಲೆ ದೂರುವುದು ಬಹಳ ಬೇಸರದ ಸಂಗತಿ. ರಾಷ್ಟ್ರೀಯ ನಾಯಕರು ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲಿ ಎಲ್ಲರಿಗೂ ಅಭಿಪ್ರಾಯ ತಿಳಿಸುವ ಅವಕಾಶವಿದೆ. ಪಕ್ಷದೊಳಗಿನ ಸಮಸ್ಯೆಗಳಿಂದಾಗಿ ಹಿನ್ನೆಡೆ ಉಂಟಾಗಿದೆ. ಕೆಲವೇ ದಿನಗಳಲ್ಲಿಇದು ಬಗೆಹರಿಯಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ಆರ್‌ ಎಸ್‌ ಎಸ್‌ ರಾಜಕೀಯ ಪಕ್ಷವಲ್ಲ. ನಾನು ಅಲ್ಲಿಗೆ ಹೋಗಿ ಸಲಹೆ ನೀಡಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅದರಲ್ಲಿ ಸತ್ಯಾಂಶವಿಲ್ಲ. ಅಂತಹ ವ್ಯವಸ್ಥೆ ಆರ್‌ ಎಸ್‌ ಎಸ್‌ ನಲ್ಲಿ ಇಲ್ಲ. ರಾಜ್ಯಾಧ್ಯಕ್ಷನ ವಿಚಾರದಲ್ಲಿ ಪಕ್ಷದ ಹಿರಿಯ ನಾಯಕರು ಎಲ್ಲವನ್ನೂ ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!