spot_img
Monday, March 16, 2026
spot_img

ಜಮ್ಮು-ಕಾಶ್ಮೀರ : ಶೂನ್ಯ ಒಳನುಸುಳುವಿಕೆ ಗುರಿಯೊಂದಿಗೆ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಭದ್ರತಾ ಪಡೆಗಳಿಗೆ ಶಾ ಖಡಕ್ ಸೂಚನೆ

ಜನಪ್ರತಿನಿಧಿ (ನವದೆಹಲಿ) : ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಹೊಸ ಯೋಜನೆಯನ್ನು ಗುರಿಯಾಗಿಟ್ಟುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭದ್ರತಾ ಪಡೆಗಳಿಗೆ ಖಡಕ್ ಸೂಚಿಸಿದ್ದಾರೆ.

ಜಮ್ಮು-ಕಾಶ್ಮೀರ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಶಾ, ಶೂನ್ಯ ಒಳನುಸುಳುವಿಕೆ ಗುರಿಯೊಂದಿಗೆ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಹೆಚ್ಚಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಕೇಂದ್ರ ಸರ್ಕಾರದ ನಿರಂತರ ಮತ್ತು ಸಂಘಟಿತ ಪ್ರಯತ್ನಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಿದ್ದು, ಶೂನ್ಯ ಒಳನುಸುಳುವಿಕೆಯನ್ನು ಗುರಿಯಾಗಿಟ್ಟುಕೊಂಡು ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಹೆಚ್ಚಿಸಲು ಎಲ್ಲಾ ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದರು.

ಒಳನುಸುಳುವಿಕೆ ಮತ್ತು ಭಯೋತ್ಪಾದಕ ಕೃತ್ಯಗಳ ವಿರುದ್ಧ ನಿರ್ದಯದೊಂದಿಗೆ ಹೆಚ್ಚು ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳುವಂತೆ ಎಲ್ಲಾ ಭದ್ರತಾ ಏಜೆನ್ಸಿಗಳಿಗೆ ಶಾ ಸೂಚಿಸಿದರು. ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ‘ಭಯೋತ್ಪಾದಕರ ಅಸ್ತಿತ್ವವನ್ನು ಬೇರು ಸಮೇತ ಕಿತ್ತು ಹಾಕುವುದು ನಮ್ಮ ಗುರಿಯಾಗಬೇಕು” ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!