spot_img
Wednesday, April 1, 2026
spot_img

ʼಪರೀಕ್ಷಾ ಪೆ ಚರ್ಚಾ’ ಈ ಬಾರಿ ಮೋದಿಯೊಂದಿಗೆ ಸದ್ಗುರು, ದೀಪಿಕಾ ಪಡುಕೋಣೆ ಭಾಗಿ !

ಜನಪ್ರತಿನಿಧಿ (ನವ ದೆಹಲಿ) : ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ಗೆ ಈ ಬಾರಿ ಹೊಸ ಆಯಾಮ ದೊರೆತಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಬಗ್ಗೆ ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯಲಿದೆ.

ಈ ಮೊದಲು ಕೇವಲ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು ಆದರೆ ಈಗ ಸೆಲೆಬ್ರಿಟಿಗಳು ಕೂಡ ಇದರ ಭಾಗವಾಗಿರಲಿದ್ದಾರೆ. ಈ ಬಾರಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಭಾಗಿಯಾಗಲಿದ್ದು, ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಲಿದ್ದಾರೆ.

ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ನಡೆಸುವ ವಿಶೇಷ ಸಂವಾದ, ಇದರಲ್ಲಿ ಅವರು ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎನ್ನುವುದರ ಬಗ್ಗೆ ಮಾರ್ಗದರ್ಶನ ನೀಡುತ್ತಾರೆ.

ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಭಾಗಿಯಾಗಲಿದ್ದಾರೆ. 50-60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಿಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಿದ್ದಾರೆ.

ಆದಾಗ್ಯೂ, ಈ ಬಾರಿ ಪ್ರಧಾನಿ ಮೋದಿಯವರೊಂದಿಗಿನ ಈ ಚರ್ಚೆಗಾಗಿ ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದ ದಾಖಲೆಯ 3.5 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ನೋಂದಾಯಿಸಿಕೊಂಡಿದ್ದಾರೆ. ಅವರೆಲ್ಲರೂ ಈಗ ಫೆಬ್ರವರಿ 10 ರಂದು ಈ ಚರ್ಚೆಯನ್ನು ಕೇಳಲು ಸಾಧ್ಯವಾಗುತ್ತದೆ ಮತ್ತು ಅವರ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 14, 2024 ರಿಂದ ಪ್ರಾರಂಭವಾಗಿ ಜನವರಿ 14, 2025 ರವರೆಗೆ ನಡೆಯಿತು. ಒಟ್ಟು 2,500 ಆಯ್ದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅವರ ಕಲಿಕಾ ಅನುಭವವನ್ನು ಹೆಚ್ಚಿಸಲು ಶಿಕ್ಷಣ ಸಚಿವಾಲಯದಿಂದ ಪಿಪಿಸಿ ಕಿಟ್‌ಗಳನ್ನು ಸ್ವೀಕರಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!