spot_img
Monday, March 16, 2026
spot_img

ಬಿಟ್ ಕಾಯಿನ್ ಪ್ರಕರಣ : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ ಗೆ SIT ನೋಟೀಸ್‌

ಜನಪ್ರತಿನಿಧಿ (ಬೆಂಗಳೂರು) : ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​ಗೆ ಸಂಕಷ್ಟ ಎದುರಾಗಿದೆ. ಹ್ಯಾಕರ್ ಶ್ರೀಕಿ ಜೊತೆ ನಲಪಾಡ್​ಗೆ ಸಂಪರ್ಕ ಇದೆ ಹಾಗೂ ವ್ಯವಹಾರಿಕ ನಂಟು ಇದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನಾಳೆ ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ಸೆಕ್ಷನ್ 41ರಡಿ ವಿಶೇಷ ತನಿಖಾ ತಂಡ (SIT) ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​ಗೆ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.

SIT ಅಧಿಕಾರಿಗಳು ಕೆಲವು ತಿಂಗಳ ಹಿಂದೆ ಕೂಡ ನಲಪಾಡ್ ಅವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದಿದ್ದರು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವ್ಯವಹಾರಿಕವಾಗಿ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸಿದ್ದರು.

ಈ ಹಿಂದೆ ವಿಚಾರಣೆ ನಡೆಸಿದ್ದ ಪೊಲೀಸರು

ಪ್ರಮುಖ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ ಎನ್ನುವ ಕಾರಣಕ್ಕೆ ಬೆಂಗಳೂರಿನ ಕಾಟನ್​ಪೇಟೆ ಹ್ಯಾಕಿಂಗ್ ಕೇಸ್​ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿತ್ತು. ಇದೀಗ ನಲಪಾಡ್ ಆರೋಪಿ ಎಂದು ಎಸ್‌ಐಟಿ ಹೇಳಿದೆ.

ಬಿಟ್‌ಕಾಯಿನ್ ಪ್ರಕರಣದಲ್ಲಿ ನಲಪಾಡ್ ಆರೋಪಿ

ಈ ಹಿಂದೆ ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ನಡೆಸಲಾಗಿತ್ತು. ಹೇಳಿಕೆ ದಾಖಲು ಮಾಡಿಕೊಂಡ ಬಳಿಕ ಪ್ರಕರಣದಲ್ಲಿ ನಲಪಾಡ್ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದೆ.

ಖುದ್ದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್

ಶ್ರೀಕಿ ಜೊತೆಗೆ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿರುವ ಹಿನ್ನಲೆಯಲ್ಲಿ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ನಲಪಾಡ್‌ಗೆ ಎಸ್‌ಐಟಿ ಅಧಿಕಾರಿಗಳು ನೊಟೀಸ್ ನೀಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ನಲಪಾಡ್‌ಗೆ ನೋಟಿಸ್​ ನೀಡಲಾಗಿತ್ತು.

ಆಗ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ ಈ ಬಾರಿ ನಲಪಾಡ್‌ರನ್ನೇ ಆರೋಪಿಸಿ ನೋಟಿಸ್ ನೀಡಲಾಗಿದೆ. ಸಿಐಡಿಯ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣ ಹ್ಯಾಕ್ ಮಾಡಿ 1 ಕೋಟಿ ರೂಪಾಯಿ ವಂಚಿಸಿದ್ದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಐಪಿಎಸ್ ಅಧಿಕಾರಿ ವಂಶಿಕೃಷ್ಣ ಅವರೆದುರು ನಲಪಾಡ್​ ಹಾಜರಾಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!