spot_img
Monday, March 16, 2026
spot_img

ತೆಕ್ಕಟ್ಟೆ ವಿಶ್ವ ವಿನಾಯಕ: 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜರಗಿತು.

ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸುಗಳಿಸಿ ಪೋಷಕರು ಹಾಗೂ ಶಾಲೆಗೆ ಕೀರ್ತಿ ತರುವಂತವರಾಗಲಿ ಎಂದು ಶುಭ ಹಾರೈಸಿದರು.

ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ. ಹೆಚ್‌ರವರು ಮುಂದಿನ ಉನ್ನತ ವಿದ್ಯಾಭ್ಯಾಸದ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಸಾಂಸ್ಕ್ರತಿಕ ಕಾರ್‍ಯಕ್ರಮವನ್ನು ಆಯೋಜಿಸಿ ವಿವಿಧ ಸ್ಪರ್ಧೆಗಳನ್ನು ನಡೆಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಿರಂತರ 10 ವರ್ಷಗಳನ್ನು ಕಳೆದು ಹಲವು ಸವಿನೆನಪುಗಳನ್ನು ತಮ್ಮ ನೆನಪಿನ ಬುತ್ತಿಯಲ್ಲಿಟ್ಟುಕೊಂಡು ಮುಂದೆ ಸಾಗುವ ಅನಿವಾರ್‍ಯತೆಯಿಂದ ವಿದ್ಯಾರ್ಥಿಗಳು ಭಾವುಕರಾದರು.
ಶಿಕ್ಷಕಿ ರೋಹಿಣಿ ಕಾರ್ಯಕ್ರಮ ಸಂಘಟಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!