spot_img
Wednesday, April 1, 2026
spot_img

ಪೋಕ್ಸೋ ಪ್ರಕರಣ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಜನಪ್ರತಿನಿಧಿ (ಧಾರವಾಡ) : ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ನ್ಯಾಯಪೀಠ ಇಂದು(ಶುಕ್ರವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಆದರೆ, ಈ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ.

ಇದರಿಂದ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದರೆ, ಈ ಪ್ರಕರಣದಿಂದ ಎದುರಾಗಿರುವ ಸಂಕಷ್ಟ ಇನ್ನೂ ತಪ್ಪಿಲ್ಲ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಕಳೆದ 2024 ಮಾರ್ಚ್‌ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದಿತ್ತು ಎನ್ನುವ ಆರೋಪ ಮಾಡಿ ಮಹಿಳೆ ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ.

ಫೆಬ್ರವರಿ 2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!