spot_img
Wednesday, April 1, 2026
spot_img

ಗುಜ್ಜಾಡಿ: ಅಷ್ಟಪವಿತ್ರ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

oplus_0

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವದ ಪ್ರಯುಕ್ತ ನಡೆಯಲಿರುವ ಶ್ರೀ ನಾಗ ದೇವರ ಜೀರ್ಣಾಷ್ಟಬಂಧ ಪುರಃಸರ ಪುನರ್ ಪ್ರತಿಷ್ಠಾ ಮಹೋತ್ಸವ, ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ದೇವಸ್ಥಾನದಲ್ಲಿ ನಡೆಯಿತು.

ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ವಿ. ಮೇಸ್ತ, ಗೌರವಾಧ್ಯಕ್ಷ ಸುರೇಶ ಖಾರ್ವಿ, ಪುರೋಹಿತರಾದ ರಾಘವೇಂದ್ರ ಅಡಿಗ ನಾಯಕವಾಡಿ ಮತ್ತು ಚೆನ್ನಕೇಶವ ಭಟ್ ಆನಗಳ್ಳಿ ಅವರು ಜಂಟಿಯಾಗಿ ಚಪ್ಪರ ಮುಹೂರ್ತ ನೆರವೇರಿಸಿ, ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದೇವಸ್ಥಾನದ ಕಾರ್ಯದರ್ಶಿ ಶ್ರೀಧರ ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಕಾರ್ಯದರ್ಶಿ ರಾಘವೇಂದ್ರ ವಿ.ಮೇಸ್ತ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಬೆಣ್ಗೆರೆ ಶ್ರೀ ಸುಬ್ರಹ್ಮಣ್ಯೇಶ್ವರ ಯುತ್ ಕ್ಲಬ್ ಅಧ್ಯಕ್ಷ ವಿಶ್ವನಾಥ ವಿ.ಮೇಸ್ತ, ಕಾರ್ಯದರ್ಶಿ ರಾಮದಾಸ ಕೆ.ಮೇಸ್ತ, ಬೆಣ್ಗೆರೆ ಖಾರ್ವಿ ಸಮಾಜ ಅಧ್ಯಕ್ಷ ಮೋಹನ ಖಾರ್ವಿ, ಕಂಚುಗೋಡು ಶ್ರೀ ರಾಮ ಮಂದಿರ ಅಧ್ಯಕ್ಷ ನಾಗೇಶ ಖಾರ್ವಿ, ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶಂಕರ ಖಾರ್ವಿ, ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಅಧ್ಯಕ್ಷ ರಘುರಾಮ ಟಿ., ಕೃಷ್ಣ ಮೇಸ್ತ, ಉದಯ ಖಾರ್ವಿ ಕಂಚುಗೋಡು, ರಾಮನಾಥ ಚಿತ್ತಾಲ್, ಚಾರೋಡಿ ಮೇಸ್ತ ಸಮಾಜ ಬಾಂಧವರು, ವಿವಿಧ ಸಮಾಜದ ಮುಖಂಡರು, ಭಕ್ತರು, ಗ್ರಾಮಸ್ಥರು ಮೊದಲಾದವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!