spot_img
Wednesday, April 1, 2026
spot_img

ಮುಡಾ ಪ್ರಕರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ | ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಜನಪ್ರತಿನಿಧಿ (ಬೆಂಗಳೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು(ಶುಕ್ರವಾರ) ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಚ ನಿರಾಳ.

ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತೀರ್ಪು ಪ್ರಕಟಿಸಿದ್ದಾರೆ.

ತೀರ್ಪಿಗೆ ಪ್ರತಿಕ್ರಿಯಿಸಿದ ಅರ್ಜಿದಾರರಾದ ಸ್ನೇಹಮಯಿ ಕೃಷ್ಣ, ಇದು ತಾತ್ಕಾಲಿಕ ಹಿನ್ನಡೆಯಾಗಿದೆ. ನ್ಯಾಯಾಲಯದ ಆದೇಶ ಪ್ರತಿ ಲಭ್ಯವಾದ ನಂತರ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದು ಹೆಸರಿಸಲಾಗಿದ್ದು, ಅವರ ಪತ್ನಿ ಬಿಎಂ ಪಾರ್ವತಿ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.

ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಮೈಸೂರಿನಲ್ಲಿ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ ಪೊಲೀಸರಲ್ಲದೆ, ಜಾರಿ ನಿರ್ದೇಶನಾಲಯವೂ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!