spot_img
Sunday, February 15, 2026
spot_img

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಿರಪರಾಧಿ ಎಂದು ಹೈಕೋರ್ಟ್ ಘೋಷಿಸಿಲ್ಲ‌ : ವಿಜಯೇಂದ್ರ ಯಡಿಯೂರಪ್ಪ

ಜನಪ್ರತಿನಿಧಿ (ಬೆಂಗಳೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಇಂದು (ಶುಕ್ರವಾರ) ಮಾಧ್ಯಮಗಳ ವರದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದಾರೆ. ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತು. ಇದು ಅರ್ಜಿಯನ್ನು ತಿರಸ್ಕರಿಸಿರುವುದಷ್ಟೇ, ಆದರೆ ಸಿಎಂ ಸಿದ್ದರಾಮಯ್ಯ ನಿರಪರಾಧಿ ಎಂದರ್ಥವಲ್ಲ ಎಂದು ಹೇಳಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಆರೋಪಗಳನ್ನು ಹೈಕೋರ್ಟ್ ಮುಕ್ತಗೊಳಿಸಿಲ್ಲ. ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸುವುದಿಲ್ಲ ಎಂದಷ್ಟೇ ಹೇಳಿದೆ. ಹೈಕೋರ್ಟ್‌ನ ಈ ನಿರ್ಧಾರವು ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬದ ಕೈವಾಡದ ಬಗ್ಗೆ ಬಿಜೆಪಿಯ ಪಾದಯಾತ್ರೆ ಸೇರಿದಂತೆ ಹೋರಾಟ ಮತ್ತು ಪ್ರತಿಭಟನೆಯನ್ನು ದುರ್ಬಲಗೊಳಿಸುವುದಿಲ್ಲ’ ಎಂದು ವಿಜಯೇಂದ್ರ ಹೇಳಿದರು.

ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಗಳು ಇನ್ನೂ ನಡೆಯುತ್ತಿವೆ ಮತ್ತು ಫಲಿತಾಂಶವನ್ನು ಕಾದು ನೋಡಬೇಕಾಗಿದೆ. ಸಾವಿರಾರು ಕೋಟಿ ರೂ.ಗಳ ಮುಡಾ ಹಗರಣದಲ್ಲಿ ಸಿಎಂ ಕುಟುಂಬದ ಕೈವಾಡವನ್ನು ಬಯಲಿಗೆಳೆಯಲು ನಾವು ಹೋರಾಟ ನಡೆಸಿದ್ದೇವೆ. ಇಂದಿನ ಹೈಕೋರ್ಟ್ ತೀರ್ಪು ಮುಖ್ಯಮಂತ್ರಿ ಅಥವಾ ಅವರ ಕುಟುಂಬವನ್ನು ನಿರಪರಾಧಿ ಎಂದು ಘೋಷಿಸಿಲ್ಲ. ಲೋಕಾಯುಕ್ತ ತನಿಖೆಯ ಅಂತಿಮ ಫಲಿತಾಂಶಕ್ಕಾಗಿ ಕಾಯೇಬೇಕು ಎಂದರು.

ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಕೆಳ ನ್ಯಾಯಾಲಯ ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದೆ. ಈ ವಿಷಯವು ದೀರ್ಘಕಾಲದವರೆಗೆ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ ಮತ್ತು ಆ ವಾದಗಳ ಆಧಾರದ ಮೇಲೆ, ನ್ಯಾಯಾಲಯವು ಈಗ ಸಮನ್ಸ್ ಅನ್ನು ಮರುಪರಿಶೀಲಿಸುವಂತೆ ಕೆಳ ನ್ಯಾಯಾಲಯಕ್ಕೆ ಸೂಚಿಸಿದೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!