spot_img
Wednesday, April 1, 2026
spot_img

ದೆಹಲಿ ಚುನಾವಣಾ ಫಲಿತಾಂಶ : ಖಾತೆ ತೆರೆಯದ ಕಾಂಗ್ರೆಸ್‌ : ರಾಷ್ಟ್ರ ಮಟ್ಟದಲ್ಲಿ ತೀವ್ರ ಮುಖಭಂಗ

ಜನಪ್ರತಿನಿಧಿ (ನವದೆಹಲಿ) : ಒಂದು ಕಾಲದಲ್ಲಿ ದೆಹಲಿಯಲ್ಲಿ ಪ್ರಬಲವಾಗಿದ್ದ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಈ ವರ್ಷ ಸೋಲಿನತ್ತ ಮುಖ ಮಾಡಿದೆ. ದೆಹಲಿಯ ಚುನಾವಣೆಯ ಫಲಿತಾಂಶ ಕೊನೆಯ ಹಂತದಲ್ಲಿತ್ತು. ಆದರೇ, ಈವರೆಗೆ ದೆಹಲಿಯ ಅಧಿಕಾರಕ್ಕಾಗಿ ನಡೆದ ಚುನಾವಣೆಯಲ್ಲಿ ಒಂದೆ ಒಂದು ಸ್ಥಾನ ಪಡೆದುಕೊಳ್ಳದೆ ಹೀನಾಯ ಸ್ಥಿತಿ ತಲುಪಿದೆ.

ಚುನಾವಣಾ ಪೂರ್ವವಾಗಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆ ಫಲಿತಾಂಶಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸೋಲನ್ನಪ್ಪಲಿದೆ ಎಂದು ಭವಿಷ್ಯ ನುಡಿದಿದ್ದವು. ಎಕ್ಸಿಟ್‌ ಪೋಲ್‌ ಸಮೀಕ್ಷೆಯ ಭವಿಷ್ಯ ದಿಟ ಆದಂತೆ ಕಾಣಿಸುತ್ತಿದೆ.

1998ರಿಂದ 2013ರವರೆಗೆ ದೆಹಲಿಯನ್ನು ಆಳಿದ ಕಾಂಗ್ರೆಸ್ 2015 ಮತ್ತು 2020ರ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ವರ್ಷದ ಎಕ್ಸಿಟ್ ಪೋಲ್ ಫಲಿತಾಂಶದಲ್ಲಿ ಹೆಚ್ಚಿನ ಸಮೀಕ್ಷಕರು ಕಾಂಗ್ರೆಸ್ ತನ್ನ ಖಾತೆಯನ್ನು ತೆರೆಯಲು ವಿಫಲವಾಗುತ್ತದೆ ಎಂದು ಭವಿಷ್ಯ ನುಡಿದಿದ್ದವು. ಹೀಗಾಗಿ, ಈ ಬಾರಿ ದೆಹಲಿಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನ ಪಡೆಯುವುದು ಕೂಡ ಕಷ್ಟಕರವಾಗಿದೆ ಹೇಳಲಾಗಿತ್ತು.

ದೆಹಲಿಯ ಅಷ್ಟೂ 70 ಕ್ಷೇತ್ರಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈವರೆಗೆ ಒಂದೇ ಒಂದು ಸ್ಥಾನ ತೆರೆಯದೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ ತೀವ್ರ ಮುಖಭಂಗ ಅನುಭವಿಸಿದೆ.

2015ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆದ್ದಿತ್ತು. ಉಳಿದ 3 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಕಾಂಗ್ರೆಸ್ ತನ್ನ ಖಾತೆಯನ್ನು ತೆರೆಯಲು ಸಹ ಸಾಧ್ಯವಾಗಲಿಲ್ಲ. ಆಮ್ ಆದ್ಮಿ ಪಕ್ಷ (ಎಎಪಿ) 2020ರಲ್ಲಿ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿತು. ಆಮ್ ಆದ್ಮಿ ಪಕ್ಷವು 62 ಸ್ಥಾನಗಳನ್ನು ಗೆದ್ದಿತು. ಬಿಜೆಪಿ 8 ಸ್ಥಾನಗಳನ್ನು ಗೆದ್ದುಕೊಂಡಿತು. ಈ ಬಾರಿಯ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಕಳೆದೆರಡು ಬಾರಿಯ ಚುನಾವಣೆಯ ಶೂನ್ಯ ಸಾಧನೆಯನ್ನೇ ಮಾಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!