spot_img
Sunday, February 15, 2026
spot_img

ಮಹಾರಾಷ್ಟ್ರ ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ಮತದಾರರು ! : ಚುನಾವಣೆ ಆಯೋಗದಿಂದ ವರದಿ ಕೇಳಿದ ರಾಹುಲ್‌ ಗಾಂಧಿ

ಜನಪ್ರತಿನಿಧಿ (ನವದೆಹಲಿ) : ಮಹಾರಾಷ್ಟ್ರದಲ್ಲಿ ಕಳೆದ ವರ್ಷಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿತ್ತು. ಇದಾದ ಬಳಿಕ ವಿಪಕ್ಷಗಳು ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ್ದವು.

ಈಗ ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ಕುರಿತು ಚುನಾವಣಾ ಆಯೋಗದಿಂದ ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ವರದಿ ಕೇಳಿದ್ದಾರೆ. ಅಷ್ಟಲ್ಲದೇ ಬಿಜೆಪಿ ವಿರುದ್ಧ ರಾಗಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ರಾಜ್ಯದ ನಿಜವಾದ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಕಂಡುಬಂದಿದ್ದಾರೆ. ಇದು ಬಿಜೆಪಿ ಪಕ್ಷಕ್ಕೆ ಪ್ರಯೋಜನವನ್ನು ನೀಡಿದೆ ಎಂದು ಅವರು ಆರೋಪಿಸಿದ್ದಾರೆ.

ಶಿವಸೇನೆಯ (ಯುಬಿಟಿ) ಸಂಜಯ್ ರಾವತ್ ಮತ್ತು ಸುಪ್ರಿಯಾ ಸುಳೆ ಎನ್‌ಸಿಪಿ (ಎಸ್‌ಪಿ) ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯ ನಂತರದ 5 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ 39 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ. ಹಿಂದಿನ 5 ವರ್ಷಗಳಲ್ಲಿ ಇದು 32 ಲಕ್ಷವಾಗಿತ್ತು ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಚುನಾವಣಾ ಆಯೋಗವನ್ನು ಸಂಪರ್ಕಿಸಿದ್ದು, ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಕೋರಿವೆ. ಆದರೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಮಹಾರಾಷ್ಟ್ರ ಚುನಾವಣೆಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ಹೇಳುತ್ತಲೇ ಇದ್ದೇವೆ. ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗಳ ಮತದಾರರ ಪಟ್ಟಿಗಳು ನಮಗೆ ಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ವಾಸ್ತವ ಸಂಗತಿಯೆಂದರೆ ಹಿಮಾಚಲ ಪ್ರದೇಶ ರಾಜ್ಯದ ಜನಸಂಖ್ಯೆಯಷ್ಟು ಮತದಾರರನ್ನು ಮಹಾರಾಷ್ಟ್ರದಲ್ಲಿ ಹೊಸತಾಗಿ ಸೇರಿಸಲಾಗಿದೆ. ಹೊಸದಾಗಿ ಎಲ್ಲೆಲ್ಲಿ ಮತದಾರರ ಹೆಸರುಗಳನ್ನು ಸೇರಿಸಲಾಗಿದೆಯೋ ಆಯಾ ಕ್ಷೇತ್ರಗಳು ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಗೆದ್ದಲ್ಲೆಲ್ಲಾ ಹೊಸ ಮತದಾರರನ್ನು ಸೇರಿಸಲಾಗಿದೆ. ವಿಚಿತ್ರವಾದ ಸಂಗತಿಯೆಂದರೆ, ಚುನಾವಣಾ ಆಯೋಗದ ಪಟ್ಟಿಯಂತೆ ಮಹಾರಾಷ್ಟ್ರದ ಜನಸಂಖ್ಯೆಗಿಂತ ಹೆಚ್ಚಿನ ಮತದಾರರು ಮತ ಚಲಾಯಿಸಿದ್ದಾರೆ. ಇವು ಊಹಾಪೋಹಗಳಲ್ಲ, ಇದೇ ನಿಜವಾದ ಸತ್ಯ. ಇದು ನಮ್ಮ ದತ್ತಾಂಶವಲ್ಲ, ಇದು ಚುನಾವಣಾ ಆಯೋಗದ ದತ್ತಾಂಶ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

https://x.com/RahulGandhi/status/1887766649862041907

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!