spot_img
Thursday, April 2, 2026
spot_img

ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯಲ್ಲಿ ತೌಹೀದ್ ಪರ್ವ

ಕುಂದಾಪುರ: ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯಲ್ಲಿ ತೌಹೀದ್ ಪರ್ವವನ್ನು ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರ ಕೇಂದ್ರ ಸಂಪನ್ಮೂಲ ವ್ಯಕ್ತಿ ಉಮ್ಮೆ ಸಲ್ಮಾ, ಸರ್ಕಾರಿ ಪ್ರೌಢಶಾಲೆ ಹೆಸ್ಕತ್ತೂರು ಇಲ್ಲಿನ ಮುಖ್ಯೋಪಾಧ್ಯಾಯರಾದ ಅಬ್ದುಲ್ ರವೂಫ್, ತೌಹೀದ್ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಜನಾಬ್ ಅಖ್ತರ್ ಅಹ್ಮದ್ ಖಾನ್, ಕಾರ್ಯದರ್ಶಿ ಜನಾಬ್ ಇಬ್ರಾಹಿಂ ಚೌಗಲೆ, ತೌಹೀದ್ ಪಬ್ಲಿಕ್ ಶಾಲೆ, ಶಿರೂರು ಇಲ್ಲಿಯ ಮುಖ್ಯೋಪಾಧ್ಯಾಯರಾದ ಶಬ್ಬೀರ್ ಅಹ್ಮದ್ ದಫೇದಾರ , ಅನಿವಾಸಿ ಗಣ್ಯರಾದ ಜನಾಬ್ ಮಹಮ್ಮದ್ ಮೀರಾ ಮಾಲಿ, ತೌಹೀದ್ ಮಹಿಳಾ ಕಾಲೇಜುಗಳ ಪ್ರಾಂಶುಪಾಲರಾದ ಶ್ರೀಮತಿ ಆಶಾ ನಾಯಕ್ ಮತ್ತು ಸಮಿನಾ ಬುಖಾರಿ, ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕರಾದ ಮೊಹಮ್ಮದ್ ತಾಹಿರ್ ಹಸನ್, ತೌಹೀದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸಬಾಬಾನುರವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ವ್ಯಾಪಾರ ಮಳಿಗೆ ಮತ್ತು ವಿಜ್ಞಾನ ಮಾದರಿ ವಸ್ತು ಪ್ರದರ್ಶನದ ಕಾರ್ಯಕ್ರಮವನ್ನು ರಿಬ್ಬನ್ ಗುಚ್ಛ ಎಳೆಯುವ ಮೂಲಕ ಶ್ರೀಮತಿ ಉಮ್ಮೆ ಸಲ್ಮಾ ಹಾಗೂ ಅಬ್ದುಲ್ ರವೂಫ್ ರವರು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾದ ಅಬ್ದುಲ್ ರವೂಫ್ ಅವರು ವಿದ್ಯಾರ್ಥಿಗಳ ಕೌಶಲ ಮತ್ತು ವ್ಯವಹಾರ ಜ್ಞಾನವನ್ನು ಪ್ರಶಂಸಿಸುವ ಮೂಲಕ ಶುಭ ಹಾರೈಸಿದರು.

ವಿದ್ಯಾರ್ಥಿಗಳು ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಖಾದ್ಯಗಳು, ತಂಪು ಪಾನೀಯಗಳು, ಸುಗಂಧ ದ್ರವ್ಯ ಇತ್ಯಾದಿ ವಸ್ತುಗಳು ಕೈಗೆಟುಕುವ ಬೆಲೆಯಲ್ಲಿ ಮಾರಾಟ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ವಿದ್ಯಾರ್ಥಿಗಳ ಪೋಷಕರು ಮತ್ತು ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡರು.

ಶಿಕ್ಷಕಿ ಅಶ್ವಿನಿ. ಬಿ ನಿರೂಪಿಸಿದರು, ಉಪನ್ಯಾಸಕಿ ಬಿಂದು ಅತಿಥಿ ಗಣ್ಯರನ್ನು ಸ್ವಾಗತಿಸಿದರು ಮತ್ತು ವಂದಿಸಿದರು. ವಿದ್ಯಾರ್ಥಿ ಅಫಾಫ್ ಕಿರಾತ್ ಪಠಿಸಿದರು. ಮೌಲಾನ ಸಿಗ್ಬತುಲ್ಲಾ ದುವಾ ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!