spot_img
Thursday, April 2, 2026
spot_img

ದೆಹಲಿ ಚುನಾವಣೆ ಫಲಿತಾಂಶ : ಆಪ್‌ ವರಿಷ್ಠ ಕೇಜ್ರೀವಾಲ್‌, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸೋಲು

ಜನಪ್ರತಿನಿಧಿ (ನವ ದೆಹಲಿ) : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಾರ್ಟಿಯ ವರಿಷ್ಠ ನಾಯಕ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಸೋಲು ಅನುಭವಿಸಿದ್ದಾರೆ. ಇದರಿಂದಾಗಿ ಎಎಪಿಗೆ ರಾಷ್ಟ್ರ ಮಟ್ಟದಲ್ಲಿ ಭಾರಿ ದೊಡ್ಡ ಪ್ರಮಾಣದಲ್ಲಿ ಮುಖಭಂಗವಾಗಿದೆ. ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಸ್ಪರ್ಧೆಗಿಳಿದಿದ್ದ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದಾರೆ.

ಪರ್ವೇಶ್ ವರ್ಮಾ ವಿರುದ್ಧ ಅರವಿಂದ್ ಸೋಲು

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಭಾರಿ ಹಿನ್ನಡೆಯಾಗಿದೆ. ನವದೆಹಲಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಪರ್ವೇಶ್ ವರ್ಮಾ ವಿರುದ್ಧ ಅರವಿಂದ್ ಕೇಜ್ರಿವಾಲ್ ಸೋಲನ್ನು ಅನುಭವಿಸಿದ್ದಾರೆ. ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.

ನಾಲ್ಕನೇ ಬಾರಿಗೆ ತಮ್ಮ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಗೆಲ್ಲುವ ಭರವಸೆಯನ್ನು ಅರವಿಂದ ಕೇಜ್ರೀವಾಲ್ ಹೊಂದಿದ್ದರು. ಆದರೆ ಬಿಜೆಪಿ ಮುಂದೆ ಪೊರಕೆ ಕೆಲಸ ಮಾಡಲಿಲ್ಲ. ಈ ಬಾರಿ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದು, ಇವರು ದೆಹಲಿ ಸಿಎಂ ರೇಸ್‌ನಲ್ಲೂ ಮುಂಚುಣಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಪರ್ವೇಶ್ ವರ್ಮಾ ಅವರು ದೆಹಲಿಯ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ.

ಮನೀಶ್ ಸಿಸೋಡಿಯಾ ಸೋಲು
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಮುಖ ನಾಯಕ ಮನೀಶ್ ಸಿಸೋಡಿಯಾ, ಜಂಗ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ್ದಾರೆ. ಪೂರ್ವ ದೆಹಲಿಯ ಪತ್ಪರ್‌ಗಂಜ್‌ನಿಂದ ಈ ಹಿಂದೆ ಸತತ ಮೂರು ಗೆಲುವುಗಳನ್ನು ಗಳಿಸಿದ್ದ ಅವರು, ಈ ಚುನಾವಣೆಯಲ್ಲಿ ಜಂಗ್‌ಪುರದಿಂದ ಸ್ಪರ್ಧಿಸಿದ್ದರು. ಜಂಗ್‌ಪುರದಲ್ಲಿ ಬಿಜೆಪಿಯ ತರವಿಂದರ್ ಸಿಂಗ್ ಮಾರ್ವಾ ಅವರು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಮನೀಶ್ ಸಿಸೋಡಿಯಾ ಅವರಿಗೆ ಅವರ ಸೋಲಿಗೆ ಕಾರಣಗಳ ಬಗ್ಗೆ ಕೇಳಿದಾಗ, ಯಾವುದೇ ಹೇಳಿಕೆಯನ್ನು ನೀಡುವ ಮೊದಲು ಫಲಿತಾಂಶಗಳನ್ನು ವಿಶ್ಲೇಷಿಸುವುದಾಗಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!