spot_img
Wednesday, April 1, 2026
spot_img

ದೆಹಲಿ ಚುನಾವಣಾ ಫಲಿತಾಂಶ : ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ದೆಹಲಿ ಸಿಎಂ ಅತಿಶಿ ಗೆಲುವು

ಜನಪ್ರತಿನಿಧಿ (ನವ ದೆಹಲಿ) :  ದೆಹಲಿಯ ಮುಖ್ಯಮಂತ್ರಿ ಅತಿಶಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ.

ಅತಿಶಿ ಸ್ಪರ್ಧಿಸಿದ್ದ ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 32 ವರ್ಷಗಳಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಈ ಕ್ಷೇತ್ರದ ಕಡೆಗೆ ಬಿಜೆಪಿ ಹೈಕಮಾಂಡ್ ಹೆಚ್ಚು ಗಮನ ಹರಿಸಿತ್ತು. ಕಲ್ಕಾಜಿ ಕ್ಷೇತ್ರ 2025ರ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಪೈಪೋಟಿಯಿಂದ ಕೂಡಿದ್ದ ಮತ್ತು ಕುತೂಹಲ ಕೆರಳಿಸಿದ್ದ ಸ್ಥಾನಗಳಲ್ಲಿ ಒಂದಾಗಿತ್ತು. 1993ರ ಬಳಿಕ ಕಲ್ಕಾಜಿ ಕ್ಷೇತ್ರದಲ್ಲಿ ಒಮ್ಮೆಯೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ್ದರು. ಬಳಿಕ 2024ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಅವರು ಅಚ್ಚರಿಯ ನಿರ್ಧಾರ ತೆಗೆದುಕೊಂಡು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ 2024ರ ಸೆಪ್ಟೆಂಬರ್ 21ರಂದು ಅತಿಶಿ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಅತಿಶಿ  ಅವರು ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಬಳಿಕ ಅಧಿಕಾರಕ್ಕೆ ಏರಿದ ದೆಹಲಿಯ 3ನೇ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಈ ವಿಧಾನಸಭಾ ಚುನಾವಣೆಯವರೆಗೆ ಮಾತ್ರ ನಾನು ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಪ್ರಮಾಣವಚನ ಸ್ವೀಕಾರದ ಸಂದರ್ಭದಲ್ಲೇ ಅತಿಶಿ ಘೋಷಿಸಿದ್ದರು. ಹೀಗಾಗಿ, ಆಮ್ ಆದ್ಮಿ ಪಕ್ಷದಿಂದ ಅರವಿಂದ್ ಕೇಜ್ರಿವಾಲ್ ಅವರೇ ಈ ಬಾರಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು.

ದೆಹಲಿಯ ಪ್ರಸ್ತುತ ಮುಖ್ಯಮಂತ್ರಿ ಅತಿಶಿ ಮರ್ಲೇನಾ ಸಿಂಗ್ 3,500 ಮತಗಳ ಅಂತರದಿಂದ  ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅಭ್ಯರ್ಥಿ ಅಲ್ಕಾ ಲಂಬಾ ಮೂರನೇ ಸ್ಥಾನ ಪಡೆದಿದ್ದಾರೆ.

ಕಲ್ಕಾಜಿ ಸ್ಥಾನದ ಹಿಂದಿನ ಚುನಾವಣಾ ಫಲಿತಾಂಶಗಳು:

ಕಲ್ಕಾಜಿ ಕ್ಷೇತ್ರದ ದಾಖಲೆಯನ್ನು ನೋಡಿದರೆ, ಅತಿಶಿ ಕಳೆದ 2020ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಅದಕ್ಕೂ ಮೊದಲು, ಆಪ್ ಅಭ್ಯರ್ಥಿ ಅವತಾರ್ ಸಿಂಗ್ ಈ ಕ್ಷೇತ್ರವನ್ನು ಗೆದ್ದಿದ್ದರು. 2013ರಲ್ಲಿ ಹರ್ಮೀತ್ ಸಿಂಗ್ ಕಲ್ಕಾ ಶಿರೋಮಣಿ ಅಕಾಲಿ ದಳದಿಂದ ಗೆದ್ದಿದ್ದರು. 1998ರಿಂದ 2008ರವರೆಗೆ ಈ ಸ್ಥಾನವನ್ನು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ಚೋಪ್ರಾ ತಮ್ಮದಾಗಿಸಿಕೊಂಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!