spot_img
Thursday, March 19, 2026
spot_img

ಜನರ ನಿರ್ಣಯವನ್ನು ಆಪ್ ನಮ್ರತೆಯಿಂದ ಸ್ವೀಕರಿಸುತ್ತದೆ | ಬಿಜೆಪಿ ಜನತೆಯ ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳಲಿ : ಕೇಜ್ರೀವಾಲ್

ಜನಪ್ರತಿನಿಧಿ (ನವ ದೆಹಲಿ) : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ವಯಂ ಹೀನಾಯ ಸೋಲು ಅನುಭವಿಸಿರುವ ಮಾಜಿ ಸಿಎಂ, ಆಪ್‌ ವರಿಷ್ಠ ನಾಯಕ ಅರವಿಂದ್ ಕೇಜ್ರೀವಾಲ್ ವೀಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಕೇಜ್ರವಾಲ್, ನಮ್ಮ ಪಕ್ಷವು ಜನರ ನಿರ್ಣಯವನ್ನು ನಮ್ರತೆಯಿಂದ ಸ್ವೀಕರಿಸುತ್ತದೆ. ಬಿಜೆಪಿ ಜನತೆಯ ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳಲಿ ಮತ್ತು ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಮಾಡಲಿ ಎಂದು ಹೇಳಿದ್ದಲ್ಲದೇ, “ಆಮ್ ಆದ್ಮಿ ಪಕ್ಷ ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಲಿದೆ’ ಎಂದು ಹೇಳಿದ್ದಾರೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪರ್ವೇಶ್ ವರ್ಮ ಎದುರು ಸೋಲು ಅನುಭವಿಸಿದ್ದಾರೆ. ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಜಂಗ್‌ಪುರ ಕ್ಷೇತ್ರದಲ್ಲಿ ಸೋಲು ಕಂಡಿರುವ ಮನೀಶ್ ಸಿಸೋಡಿಯಾ ಕೂಡ ಕೇಜ್ರವಾಲ್‌ ನಿವಾಸಕ್ಕೆ ಆಗಮಿಸಿದ್ದಾರೆ.‌

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!