spot_img
Thursday, March 19, 2026
spot_img

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷ ಶೀನ ಪೂಜಾರಿ ಬಿಜೆಪಿ ಸೇರ್ಪಡೆ

ಜನಪ್ರತಿನಿಧಿ ವಾರ್ತೆ] ಫೆ.10: ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಶೀನ ಪೂಜಾರಿ ಅವರು ಸೋಮವಾರ ಮಧ್ಯಾಹ್ನ ಕುಂದಾಪುರ ಮಂಡಲ ಬಿಜೆಪಿ ಕಛೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.

ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷರಾದ ಸುರೇಶ ಶೆಟ್ಟಿ ಗೋಪಾಡಿ ಅವರು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಬಸ್ರೂರು ವ್ಯವಸಾಯ ಸೇವಾ ಸಹಕಾರಿಸ ಸಂಘದ ಚುನಾವಣೆ ಸಂದರ್ಭ ನಿರೀಕ್ಷೆ ಜಾಸ್ತಿ ಇತ್ತು. ಆದರೆ ಸಮಬಲ ಕಂಡುಕೊಂಡಿತ್ತು. ಸುಮಾರು ೧೧ ಬಾರಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ ಶೀನ ಪೂಜಾರಿ ಅವರಿಗೆ ಸೂಕ್ತ ಸ್ಥಾನಮಾನವನ್ನು ಕಾಂಗ್ರೆಸ್ ಪಕ್ಷ ನೀಡಲಿಲ್ಲ. ಶೀನ ಪೂಜಾರಿ ಅವರು ಒಳ್ಳೆಯ ತೀರ್ಮಾನವನ್ನು ತಗೆದುಕೊಂಡು ಭಾರತೀಯ ಜನತಾ ಪಕ್ಷಕ್ಕೆ ಬಂದಿದ್ದಾರೆ. ಇಲ್ಲಿಯ ತನಕ ಜನರಿಗೆ ತನ್ನಿಂದಾದ ಸೇವೆ ನೀಡುತ್ತಾ ಬಂದವರು. ಒಳ್ಳೆಯ ಹೆಸರನ್ನು ಹೊಂದಿದ್ದಾರೆ ಎಂದರು.

ಬಿಜೆಪಿಗೆ ಸೇರ್ಪಡೆಗೊಂಡ ಶೀನ ಪೂಜಾರಿ ಮಾತನಾಡಿ, 11 ಬಾರಿ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಗ್ರಾಮ ಪಂಚಾಯತ್ ಸದಸ್ಯನಾಗಿಯೂ ಸೇವೆ ಸಲ್ಲಿಸಿದ್ದೇನೆ. ಆದರೆ ನನಗೆ ಸರಿಯಾದ ಅವಕಾಶವನ್ನು ಕಾಂಗ್ರೆಸ್ ಪಕ್ಷ ನೀಡಲಿಲ್ಲ. ಜನರ ಪರವಾಗಿ ಕೆಲಸ ಮಾಡಲು ಸೂಕ್ತ ಅವಕಾಶಗಳು ಬೇಕಿತ್ತು ಎಂದರು.
ಮಂಡಲದ ಅಧ್ಯಕ್ಷರಾದ ಸುರೇಶ ಶೆಟ್ಟಿ ಗೋಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೀನ ಪೂಜಾರಿ, ಉಪಾಧ್ಯಕ್ಷ ಸಂಜೀವ ಪೂಜಾರಿ ಅವರನ್ನು ಅಭಿನಂದಿಸಲಾಯಿತು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಜಿಲ್ಲಾ ಉಪಾಧ್ಯಕ್ಷರಾದ ಕಾಡೂರು ಸುರೇಶ ಶೆಟ್ಟಿ, ಪುರಸಭೆ ಅಧ್ಯಕ್ಷರಾದ ಮೋಹನದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಎಸ್.ಬಿಲ್ಲವ, ಮಂಡಲದ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್ ಉಪಸ್ಥಿತರಿದ್ದರು.

ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!