spot_img
Thursday, March 19, 2026
spot_img

ರಾಷ್ಟ್ರ ರಾಜಧಾನಿ ರಾಜಕಾರಣಕ್ಕೆ ಮಹಿಳಾ ಸಾರಥಿ !? | ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಬಿಜೆಪಿ ಹೈಕಮಾಂಡ್‌ ಒಲವು

ಜನಪ್ರತಿನಿಧಿ (ನವ ದೆಹಲಿ) :  27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಗೆದ್ದು ಜಯಭೇರಿ ಬಾರಿಸಿದ್ದು, ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ರಾಜಕೀಯದಲ್ಲಿ ಮಹತ್ವ ಪಡೆದಿರುವ ಲಿಂಗ ಮತ್ತು ಜಾತಿಯಂತಹ ಬೇರೆ ಬೇರೆ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಸಮತೋಲಿತ ಅಭ್ಯರ್ಥಿ ನೇಮಕಕ್ಕಾಗಿ ಬಿಜೆಪಿ ಹೈಕಮಾಂಡ್‌ ಪ್ರಯತ್ನಿಸುತ್ತಿದೆ. ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ನೇಮಿಸಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮಹಿಳೆ ಅಥವಾ ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಯು ಬಿಜೆಪಿ ಕೇಂದ್ರ ನಾಯಕತ್ವದ ಆಯ್ಕೆಯಾಗಲಿದೆ ಎಂಬ ಊಹಾಪೋಹಗಳು  ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ವಿದ್ಯಾರ್ಥಿ ಜೀವನದಿಂದಲೇ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ರೇಖಾ ಗುಪ್ತಾ ಅವರು ಪ್ರಬಲ ಸ್ಪರ್ಧಿಯಾಗಿ ಕಾಣುತ್ತಾರೆ. ಅವರ ವೈಶ್ಯ ಸಮುದಾಯದ ಹಿನ್ನೆಲೆ ಮತ್ತು ಡಿಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಅನುಭವವು ಅವರಿಗೆ ಸಹಾಯ ಮಾಡಬಹುದು ಎಂದು ಹೇಳಲಾಗುತ್ತಿದೆ. ಜಾತಿವಾರು, ಮಹಿಳೆ, ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲು ಮುಖ್ಯಮಂತ್ರಿ ಜತೆಗೆ ಒಂದು ಅಥವಾ ಎರಡು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಸಾಧ್ಯತೆಗಳಿವೆ.

ಬಿಜೆಪಿ ಹೈಕಮಾಂಡ್‌ ಹಿಂದೆ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಮುಖ್ಯಮಂತ್ರಿಯಾಗಿಸಿದ ನಿದರ್ಶನಗಳಿವೆ. ಹೀಗಾಗಿ ಈ ಬಾರಿ ದೆಹಲಿಯಲ್ಲಿಯೂ ಹೊಸ ಮುಖಕ್ಕೆ ಮಣೆಹಾಕಿದರೂ ಅಚ್ಚರಿಯಿಲ್ಲ.

ಆದರೆ, ರಾಜ್ ಕುಮಾರ್ ಚೌಹಾಣ್ ಅವರಂತಹ ಎಸ್‌ಸಿ ಅಭ್ಯರ್ಥಿಗಳ ಉಲ್ಲೇಖವು ಮತ್ತೊಂದು ಸಮೀಕರಣವಾಗಿದೆ , ಏಕೆಂದರೆ ಬಿಜೆಪಿ ಪ್ರಬಲ ಸಮುದಾಯದ ಯಾರನ್ನಾದರೂ ಆಯ್ಕೆ ಮಾಡಬಹುದು.

ದೆಹಲಿ ಬಿಜೆಪಿ ಸಂಭಾವ್ಯ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಚರ್ಚಿಸಲು ಪ್ರಮುಖ ಸಭೆಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಮೊದಲನೆಯದು ಜಾಟ್ ಸಮುದಾಯದಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು. ಇದು ದೆಹಲಿ ಮತ್ತು ಅದರ ನೆರೆಯ ರಾಜ್ಯಗಳಾದ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಗಮನಾರ್ಹ ಜನಸಂಖ್ಯೆ ತಲುಪುಲು ಸಹಾಯವಾಗುತ್ತದೆ.

ಎರಡನೇ ಆಯ್ಕೆಯೆಂದರೆ, ಪರಿಶಿಷ್ಟ ಸಮುದಾಯದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು. ಏಕೆಂದರೆ ಅದು ಬಿಹಾರದ ಮತದಾರರನ್ನು ಓಲೈಸುವ ಸಾಧ್ಯತೆಯಿದೆ, ಜೊತೆಗೆ ಆ ರಾಜ್ಯದಲ್ಲಿ ಮುಂಬರುವ ಚುನಾವಣೆಗಳಿಗೆ ನೆರವಾಗುತ್ತದೆ ಎಂಬ ಲೆಕ್ಕಚಾರವಾಗಿದೆ.

ಮೂರನೇ ಆಯ್ಕೆ ಮಹಿಳಾ ಅಭ್ಯರ್ಥಿ. “ಇದು ಪ್ರಧಾನಮಂತ್ರಿಯ “ಮಹಿಳಾ ನೇತೃತ್ವದ ಅಭಿವೃದ್ಧಿ” ನಿರೂಪಣೆಗೆ ಅನುಗುಣವಾಗಿ ಕಾರ್ಯತಂತ್ರದ ಕ್ರಮವಾಗಿರುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!