spot_img
Sunday, February 15, 2026
spot_img

ಯಕ್ಷ ಕಲೆಯೊಳಗೆ ಬೆರೆಯುವ ಅವಕಾಶಕ್ಕೆ ಖುಷಿ ಇದೆ-ಡಾ. ಉಮಾಶ್ರೀ

ಬೆಂಗಳೂರು: ಕರಾವಳಿಯ ಜೀವಂತ ಕಲೆಯಲ್ಲಿ ಜೀವಿಸುವ ಭಾಗ್ಯ ಸಿಕ್ಕಿದೆ. ಬಹುವಾಗಿ ಪಾಂಡಿತ್ಯರು, ಶಾಸ್ತೀಯವಾಗಿ ಕಲಿತು ಪರಿಪೂರ್ಣತೆಯನ್ನು ಸಾಧಿಸಿದ ಸಾವಿರ ಸಾವಿರ ಸಂಖ್ಯೆಗೂ ಮೀರಿದ ಕಲಾವಲಯವಾಳಿದ ಲೋಕಕ್ಕೆ ನಾನು ನನ್ನ ಸಂತೋಷಕ್ಕಾಗಿ ಬಂದಿದ್ದೇನೆ. ಯಶಸ್ವೀ ಕಲಾವೃಂದದ ಶ್ವೇತಯಾನದ ನೂರೆಂಟರಲ್ಲಿ ಭಾಗವಹಿಸುವ ಅವಕಾಶ ದೊರೆತದ್ದು ನನ್ನ ಪುಣ್ಯ. ಶಾಸ್ತ್ರೀಯಾವಾಗಿ ಕಲಿತ ಪಂಡಿತರ ಟೀಕೆ ಟಿಪ್ಪಣಿಗಳಿಂದ ಹೊರತಾದವರು ನಾವು. ಯಾಕೆಂದರೆ ಯಕ್ಷ ಕಲೆಯೊಳಗೆ ಬೆರೆಯುವ ಅವಕಾಶಕ್ಕೆ ಖುಷಿ ಪಟ್ಟು ಬಂದವಳು ನಾನು. ಈ ಕಲೆಯನ್ನು ಗೌರವಿಸುತ್ತಾ ಒಪ್ಪಿದ್ದೇನೆ, ಅಪ್ಪಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯೆ ಡಾ. ಉಮಾಶ್ರೀ ಹೇಳಿದರು.

ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಫೆಬ್ರವರಿ 8ರಂದು ಯಶಸ್ವೀ ಕಲಾವೃಂದ (ರಿ.) ಕೊಮೆ ತೆಕ್ಕಟ್ಟೆಯ ಸಿನ್ಸ್ 1999 ಶ್ವೇತಯಾನ-108ರ ಕಾರ್ಯಕ್ರಮವನ್ನು ಕಿರೀಟಕ್ಕೆ ನವಿಲಗರಿಯನ್ನು ಇಡುವ ಮೂಲಕ ಉದ್ಘಾಟಿಸಿ ಮಾತನ್ನಾಡಿದರು.

ಪ್ರಸಂಗಕರ್ತ ಪ್ರೊ. ಪವನ್ ಕಿರಣ್‌ಕೆರೆ ಶುಭಶಂಸನೆಗೈದು, ಮಕ್ಕಳಿಗೆ ಕಲೆಯನ್ನು ಕಲಿಸುತ್ತಾ ಕಲೆಯನ್ನು ಕೈ ದಾಟಿಸುವ ಕೆಲಸ ಯಶಸ್ವಿ ಸಂಸ್ಥೆ ಮಾಡುತ್ತಿದೆ. ಕಲಾ ವಲಯದಲ್ಲಿ ಕಲಾವಿದ ವಿಜೃಂಬಿಸಬೇಕಾದರೆ ಸಂಘಟಕ ಮತ್ತು ಪ್ರೇಕ್ಷಕ ಇವೆರಡು ದೊಡ್ಡ ಆಸ್ತಿಯಾಗಿರುತ್ತದೆ. ಮೂರನೆಯ ದೊಡ್ಡ ಶಕ್ತಿಯಾಗಿ ಪೋಷಕ ನಿಂತರೆ ನಾಲ್ಕನೆಯವರಾಗಿ ಕಲಾವಿದರಾದ ನಾವು ಕಲೆಯನ್ನು ವಿಸ್ತರಿಸುತ್ತಾ, ಪೋಷಿಸುತ್ತಾ ಸಾಗುತ್ತೇವೆ. ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸುತ್ತಾ ಯಕ್ಷಗಾನದ ಬಗೆಗೆ ಒಳ್ಳೆಯ ಪ್ರೇಕ್ಷಕ ವರ್ಗವನ್ನು, ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ನೀಡುವ ಸಂಘಟಕ ವರ್ಗವನ್ನು ಯಶಸ್ವೀ ಕಲಾವೃಂದ ಮಾಡುತ್ತಿರುವ ಕೊಡುಗೆಯನ್ನು ನಾವು ಗಮನಿಸಲೇ ಬೇಕಾದ ಕೊಡುಗೆ. ಯಕ್ಷ ಕಲಾವಲಯದ ಆಚೆ ಇರುವವರು ಯಕ್ಷಗಾನಕ್ಕೆ ಬರುವಂತೆ ಆಗಬೇಕು. ಈ ಸಾಧನೆಯನ್ನು ನಟಿ ಉಮಾಶ್ರೀಯ ಆಗಮನದ ಮೂಲಕ ಸಾಧಿಸಿದ್ದಾರೆ. ಶ್ವೇತಯಾನ ನೂರೆಂಟಕ್ಕೆ ನಿಲ್ಲದೇ ಸಾವಿರದ ಕಾರ್ಯಕ್ರಮವಾಗಲಿ. ಅಕ್ಷರಾರ್ಥದಿಂದ ಸಾವೇ ಇರದ ಕಾರ್ಯಕ್ರಮ ಯಶಸ್ವೀ ಕಲಾವೃಂದದಿಂದಾಗಲಿ ಎಂದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಸುಜಯೀಂದ್ರ ಹಂದೆ ಅವರು ಕುಂದಾಪುರದ ಕುಗ್ರಾಮ ಕೊಮೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವುದಕ್ಕೆ ಕಾರಣ ಯಶಸ್ವೀ ಕಲಾವೃಂದ. ಈ ಸಂಸ್ಥೆ ತನ್ನನ್ನು ತಾನು ವಿಸ್ತರಿಸಿಕೊಳ್ಳುತ್ತಾ ಜಗತ್ತಿನಾದ್ಯಂತ ಗುರುತಿಸಿಕೊಂಡಿದೆ. ಹಳ್ಳಿ ಹಳ್ಳಿಗಳೂ ಸಾಂಸ್ಕೃತಿವಾಗಿ ಹೆಚ್ಚು ಹೆಚ್ಚು ತೊಡಗಿಸಿಕೊಂಡರೆ ಅದು ಒಂದು ದೇಶದ ನಿಜವಾದ ಸಂಪತ್ತು. ಆ ನಿಟ್ಟಿನಲ್ಲಿ ಯಶಸ್ವೀ ಕಲಾವೃಂದ ರಾಷ್ಟ್ರದ ಸಂಪತ್ತನ್ನು ಹೆಚ್ಚಿಸುವಲ್ಲಿ ದೊಡ್ಡ ಕೊಡುಗೆ ಕೊಟ್ಟಿದೆ ಎಂದರು.

ಡಾ. ದೀಪಕ್ ಶೆಟ್ಟಿ ಮಾತನಾಡಿ, ನಟಿ ಉಮಾಶ್ರೀ ಯಕ್ಷ ವಲಯಕ್ಕೆ ಬಂದದ್ದು ನಿಜಕ್ಕೂ ಕಲೆಯ ವಿಸ್ತರಣೆಯಾದಂತಾಗಿದೆ. ಉಮಾಶ್ರಿಯವರು ತಾಳಮದ್ದಳೆಯಲ್ಲಿ ಬಹಳ ಮನೋಜ್ಞವಾಗಿ ಅಭಿನಯಿಸಿದ್ದಾರೆ ಎಂದರು.

ಡಾ. ಕೆ.ಸಿ. ಬಲ್ಲಾಳ್ ಮಾತನಾಡಿ, ತೆಕ್ಕಟ್ಟೆಯ ಹಲವರು ಚಿತ್ರರಂಗದಲ್ಲಿ, ಯಕ್ಷಗಾನದಲ್ಲಿ ವಿಜೃಂಬಿಸಿದ್ದಾರೆ. ಹಾಗೆಯೂ ಈ ಸಂಸ್ಥೆಯೂ ನೂರಾರು ಕಾಲ ಮೆರೆಯಲಿ ಎಂದರು.

ಮಲ್ಯಾಡಿ ಸೀತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಹೂವಿನಕೋಲು, ಒಡ್ಡೋಲಗಗಳು, ಗಾನ ವೈಭವ, ವಾಗ್ವಿಲಾಸದ ಯಕ್ಷವಿಶೇಷ ಪ್ರಸಾದ್ ಕುಮಾರ್ ಮೊಗೆಬೆಟ್ಟು ವಿರಚಿತ ನವನೀತ ರಂಗ ಪ್ರಸ್ತುತಿಗೊಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!