spot_img
Wednesday, April 1, 2026
spot_img

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು ಸಂಸದ ಕೋಟ ಮನವಿಗೆ ಸ್ಪಂದನೆ

ಕುಂದಾಪುರ: ೧೪೪ ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗ್ ರಾಜ್ ನ ಮಹಾ ಕುಂಭ ಮೇಳಕ್ಕೆ ತೆರಳ ಬೇಕು ಎನ್ನುವ ಅಸಂಖ್ಯಾತ ಉಡುಪಿ ,ದಕ್ಷಿಣ ಕನ್ನಡ,ಶಿವಮೊಗ್ಗ,ಚಿಕ್ಕಮಗಳೂರು ಭಾಗದ ಹಿಂದೂಗಳ ಆಸೆಗೆ ಪೂರಕವಾಗಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಶ ಕುಂಭ ಮೇಳ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರ ಬಳಿ ಮನವಿ ಮಾಡಿದ್ದು, ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರದಲ್ಲೇ ಕುಂಭ ಮೇಳ ವಿಶೇಷ ರೈಲನ್ನು ಉಡುಪಿ ಪ್ರಯಾಗ್ ರಾಜ್ ನಡುವೆ ಓಡಿಸುವುದಾಗಿ ಸಂಸದರಿಗೆ ತಿಳಿಸಿದ್ದಾರೆ.

ಮಕರ ಸಂಕ್ರಾಂತಿಯಿಂದ ಶಿವರಾತ್ರಿ ನಡುವೆ ನಡೆಯುವ ಕುಂಭ ಮೇಳ ಈ ಬಾರಿ ಅತ್ಯಂತ ವಿಶಿಷ್ಟವಾಗಿದ್ದು 144 ವರ್ಷಗಳಿಗೆ ಮಾತ್ರ ಬರುವ ಮಹಾ ಕುಂಭ ಮೇಳ ಈ ಬಾರಿ ಘಟಿಸಲಿದ್ದು, ಶಿವರಾತ್ರಿಗೂ ಹತ್ತುದಿನ ಮುಂಚಿತವಾಗಿ ಪೆಬ್ರವರಿ 16-17 ರ ಸುಮಾರಿಗೆ ಓಡುವ ಸಮಯ ಪಟ್ಟಿ ಇರುವ ವಿಶೇಷ ರೈಲನ್ನು ಘೊಷಿಸ ಬೇಕು ಎಂಬ ಬೇಡಿಕೆ ಇಟ್ಟು ಸಂಸದರು ಇದೇ ತಿಂಗಳ 9ನೇ ತಾರೀಕಿನಂದು ದೆಹಲಿಯಲ್ಲಿ ಸಚಿವರನ್ನು ಬೇಟಿಯಾಗಿದ್ದರು.

ದೇಶಾದ್ಯಂತ ಎಲ್ಲಾ ನಗರಗಳಿಂದಲೂ ವಿಶೇಷ ರೈಲುಗಳು ಓಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯ ಕುಂಭ ಮೇಳ ಸೇವೆಗಳು ಉಡುಪಿ ಜಿಲ್ಲೆಯ ಅಸಂಖ್ಯಾತ ಭಕ್ತರಿಗೂ ಲಭಿಸ ಬೇಕು ಎನ್ನುವ ಕಾರಣದಿಂದ ಸಂಸದರು ವಿಶೇಷ ಪ್ರಯತ್ನ ನಡೆಸಿದ್ದು, ದೇಶಾದ್ಯಂತ ರೈಲು ಬೋಗಿಗಳ ಕೊರತೆಯ ಕಾರಣಗಳನ್ನು ಇಲಾಖೆ ನೀಡುತಿದ್ದರೂ ,ಸಾಮಾನ್ಯ ಜನರಿಗೂ ಕೈಗೆಟುಕಲಿ ಎಂಬ ದೃಷ್ಟಿಯಿಂದ, ಜನರಲ್, ಮತ್ತು ಏಸಿ ಕೋಚ್ ಇರುವ ರೈಲಿನ ವ್ಯವಸ್ಥೆಗೆ ಸಂಸದರು ಮನವಿ ಇಟ್ಟಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!