spot_img
Wednesday, April 1, 2026
spot_img

ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದಕ್ಕೆ

ಜನಪ್ರತಿನಿಧಿ (ಬೆಂಗಳೂರ) : ಫೆಬ್ರವರಿ 17ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಶಿವರಾತ್ರಿಯ ನಂತರ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ದೃಢಪಡಿಸಿದ್ದು, ಫೆಬ್ರವರಿ 27ಕ್ಕೆ ಹೊಸ ದಿನಾಂಕ ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ಇದೇ ಫೆ.16 (ಭಾನುವಾರ)ರಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ ವತಿಯಿಂದ ಚಾಮರಾಜನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್‌ ಸಮಾವೇಶವನ್ನೂ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಜೊತೆಗೆ ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮವೂ ಮುಂದೂಡಲ್ಪಟ್ಟಿದೆ.

ಮುಖ್ಯಮಂತ್ರಿಗಳ ಕಾಲಿನ ಗಾಯ ಮತ್ತು ಉದ್ಘಾಟನೆಗಾಗಿ ಯೋಜಿಸಲಾದ ಹಲವು ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲದ ಕಾರಣ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಕ್ರಮಗಳ ಸಿದ್ಧತೆಗಳು ಸಂಪೂರ್ಣವಾಗಿ ಪೂರ್ಣಗೊಂಡ ನಂತರ ಎಲ್ಲಾ ಕಾರ್ಯಕ್ರಮಗಳು ಮುಂದುವರಿಯುತ್ತವೆ ಎಂದು ರಾಜ್ಯ ಸರ್ಕಾರ ಭರವಸೆ ನೀಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!