spot_img
Wednesday, April 1, 2026
spot_img

ಕೆರಾಡಿ ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ : ಕ್ಲಸ್ಟರ್ ಹಂತದ ವಿದ್ಯಾರ್ಥಿಗಳಿಂದಲೇ ಉದ್ಘಾಟನೆ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾಲ (ನಂದ್ರೋಳ್ಳಿ) ಇಲ್ಲಿ ಕೆರಾಡಿ ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ ಫೆ.12ರಂದು ಜರುಗಿತು. ಕ್ಲಸ್ಟರ್ ಹಂತದ ವಿದ್ಯಾರ್ಥಿಗಳಿಂದಲೇ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ ವಹಿಸಿದ್ದರು.

ಕೆರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುದರ್ಶನ ಶೆಟ್ಟಿ, ಉಪಾಧ್ಯಕ್ಷೆ ಕುಸುಮ, ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಶೆಟ್ಟಿ ಸಬ್ಲಾಡಿ, ಜ್ಯೋತಿ ಶೆಟ್ಟಿ, ಶಾಲಾ ವಾರ್ಷಿಕೋತ್ಸವದ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರೊ. ರಘುರಾಮ್ ಶೆಟ್ಟಿ, ಉಪಾಧ್ಯಕ್ಷರಾದ ಕರುಣಾಕರ ಶೆಟ್ಟಿ ಹರ್ಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ ಇಲಾಖಾ ಪ್ರತಿನಿಧಿಗಳಾಗಿ ಸಮನ್ವಯ ಅಧಿಕಾರಿಯಾದ ಪ್ರದೀಪಕುಮಾರ ಶೆಟ್ಟಿ, ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೆರಿ, ಬಿ ಆರ್ ಪಿ ಮಂಜುನಾಥ ನಾಯಕ ಹಾಗೂ ಕಲಿಕಾ ಹಬ್ಬದ ನೋಡಲ್ ಬಿ.ಆರ್.ಪಿ ರಾಮಕೃಷ್ಣ ದೇವಾಡಿಗ, ಸಿ.ಆರ್.ಪಿ ಗಳಾದ ರವಿಚಂದ್ರ ಕರ್ಕುಂಜೆ, ಶೈಲಜಾ ಕೊಲ್ಲೂರು, ರಾಘವೇಂದ್ರ ಆಜ್ರಿ ಮಾನಂಜೆ, ಸಂಪನ್ಮೂಲ ವ್ಯಕ್ತಿಗಳಾದ ಸುರೇಂದ್ರ, ನಿಜಲಿಂಗಪ್ಪ, ಸವಿತಾ ಹಾಗೂ ವಿದ್ಯಾರ್ಥಿ ನಾಯಕ ಪ್ರಜ್ವಲ್ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ. ನಾಗರಾಜ ಶೆಟ್ಟಿಯವರು ಸ್ವಾಗತಿಸಿದರು, ಶಾಲಾ ಮುಖ್ಯ ಶಿಕ್ಷಕರಾದ ಕರುಣಾಕರ ಶೆಟ್ಟಿ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ರಾಧಿಕಾ ಮತ್ತು ಸುಮಿತ್ರ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿಯರಾದ ಅಂಬಿಕಾ ಹಾಗೂ ವಿದ್ಯಾಶ್ರೀ ಕಾರ್ಯಕ್ರಮಕ್ಕೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!