spot_img
Wednesday, April 1, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ : ಫೆ. 22ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ಉಡುಪಿ ಜಿಲ್ಲಾ ರೈತ ಸಂಘ ನಿರ್ಧಾರ

ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಶಂಕೆ : ಪ್ರತಾಪಚಂದ್ರ ಶೆಟ್ಟಿ ಆಕ್ರೋಶ 

ಜನಪ್ರತಿನಿಧಿ (ಬ್ರಹ್ಮಾವರ) : ಹಗರಣ ನಡೆದು ಎರಡು ವರ್ಷ ನಾಲ್ಕು ತಿಂಗಳಾಯ್ತು. ಸರಕಾರ ಇನ್ನೂ ನಿದ್ರೆ ಮಾಡುತ್ತ ಇದೆ. ಈ ಪ್ರಕರಣದ ಬಗ್ಗೆ ಎಫ್.ಐ.ಆರ್. ಆಗಿ ಒಂದುವರೆ ವರ್ಷ ಆಗಿದೆ. ಪೊಲೀಸ್ ತನಿಖೆ ಮಾಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರಕಾರ ಕಳುಹಿಸಿ ೬ ತಿಂಗಳಾಯಿತು. ಕಾಂಗ್ರೆಸ್ ನೇತೃತ್ವದ ಸರಕಾರ ಬಿಜೆಪಿಯ ಮೇಲೆ ಪ್ರೀತಿ ತೋರಿಸಿ ಅಧಿಕಾರಿಗಳ ಒತ್ತಡಕ್ಕೆ ಮಣಿದು, ಕಡತವನ್ನು ಅಲ್ಲೇ ಇಟ್ಟುಕೊಂಡಿದೆ. ಇದರ ಹಿಂದಿನ ರಾಜಕಾರಣವೇನೆಂಬುದು ಜನರಿಗೆ, ರೈತರಿಗೆ ತಿಳಿಯದಾಗಿದೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ ಆಕ್ರೋಶ ಹೊರ ಹಾಕಿದ್ದಾರೆ.

ಅವರು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಸಹಕಾರಿ ಮಂಟಪದಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ರೈತ ಸಂಘ(ರಿ.)ದ ನೇತೃತ್ವದಲ್ಲಿ ರೈತ ಜಾಗೃತಿಗಾಗಿ ಸಕ್ಕರೆ ಕಾರ್ಖಾನೆಯ ಸದಸ್ಯರು, ವಿವಿಧ ರೈತ ಸಂಘಟನೆಗಳು, ಸಹಕಾರಿ ಕ್ಷೇತ್ರದ ಪ್ರಮುಖರು, ಪಂಚಾಯತ್ ರಾಜ್ ಒಕ್ಕೂಟದ ಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಸಭೆಯನ್ನು ಉದ್ದೇಶಿಸಿ ಇಂದು(ಬುಧವಾರ) ಮಾತನಾಡಿದರು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಬಹುಕೋಟಿ ಹಗರಣದ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಪ್ರಕರಣದಲ್ಲಿ ಸಿಲುಕಿದ ಬಹುತೇಕ ಮಂದಿ ಜಾಮೀನು ಪಡೆದುಕೊಂಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್‌ ಸರ್ಕಾರ ಮತ್ತು ಎರಡೂ ಸರ್ಕಾರಗಳ ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿದ್ದಾರೆ. ನಮ್ಮ ಹೋರಾಟ ನಿಲ್ಲುವುದಿಲ್ಲ. ನ್ಯಾಯಾಂಗದ ಮೆಟ್ಟಿಲೇರಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವುವವರೆಗೆ ನಾವು ಸುಮ್ಮನಿರುವುದಿಲ್ಲ. ಪಕ್ಷಾತೀತವಾಗಿ ಜಿಲ್ಲೆಯಲ್ಲಿರುವ ಎಲ್ಲಾ ಸಂಘ ಸಂಸ್ಥೆಗಳನ್ನು ಒಟ್ಟುಗೂಡಿಸಿಕೊಂಡು ಹೋರಾಟ ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.

ಬರುವ ಫೆ. 22 ನೇ ತಾರೀಕಿನಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಕೈಗೊಳ್ಳಲು ರೈತ ಪರ ಮುಖಂಡರು ನಿರ್ಧಾರ ಮಾಡಿದ್ದೇವೆ. ಜಿಲ್ಲೆಯ ಎಲ್ಲಾ ಸಂಘಟನೆಗಳು ಸಹಕಾರ ನೀಡುತ್ತವೆ ಎನ್ನುವ‌ ವಿಶ್ವಾಸವಿದೆ. ಫೆ. 22 ರೊಳಗೆ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾದಲ್ಲಿ ಸತ್ಯಾಗ್ರಹ ಹಿಂಪಡೆಯುತ್ತೇವೆ ಎಂದೂ ಕೂಡ ಅವರು ಈ ಸಂದರ್ಭ ಹೇಳಿದ್ದಾರೆ.

ಸಭೆಯಲ್ಲಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ,‌ ಮಲ್ಯಾಡಿ ಶಿವರಾಮ ಶೆಟ್ಟಿ, ದಿನೇಶ್‌ ಹೆಗ್ಡೆ ಮೊಳಹಳ್ಳಿ, ಸತೀಶ್‌ ಕಿಣಿ, ಉದಯ್‌ ಕುಮಾರ್‌ ಶೆಟ್ಟಿ, ಸದಾನಂದ ಶೆಟ್ಟಿ ಕೆದೂರು, ಅಶೋಕ್‌ ಶೆಟ್ಟಿ ಚೋರಾಡಿ ಸೇರಿ ರೈತ ಮುಖಂಡರು, ಸಕ್ಕರೆ ಕಾರ್ಖಾನೆಯ ಸದಸ್ಯರು, ವಿವಿಧ ರೈತ ಸಂಘಟನೆಗಳು, ಸಹಕಾರಿ ಕ್ಷೇತ್ರದ ಪ್ರಮುಖರು, ಪಂಚಾಯತ್ ರಾಜ್ ಒಕ್ಕೂಟದ ಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಎಲ್ಲಾ ಸಂಘಟನೆಗಳ ಪ್ರತಿನಿಧಿಗಳು ಉಡುಪಿ ಜಿಲ್ಲಾ ರೈತ ಸಂಘದ ಈ ಹೋರಾಟಕ್ಕೆ ಬೆಂಬಲಿಸುವುದಾಗಿ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!