spot_img
Monday, March 16, 2026
spot_img

ವಕ್ಫ್ (ತಿದ್ದುಪಡಿ) ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿಯ ವರದಿ ರಾಜ್ಯಸಭೆಯಲ್ಲಿ ಮಂಡನೆ

ಜನಪ್ರತಿನಿಧಿ (ನವದೆಹಲಿ) : ವಕ್ಫ್ (ತಿದ್ದುಪಡಿ) ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿ(JPC)ಯ ವರದಿಯನ್ನು ರಾಜ್ಯಸಭೆಯಲ್ಲಿ ಇಂದು(ಗುರುವಾರ) ಮಂಡಿಸಲಾಯಿತು.

ಜೆಪಿಸಿ ವರದಿ ಮಂಡಿಸುತ್ತಿದ್ದಂತೆ ವಿರೋಧ ಪಕ್ಷಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಕೋಲಾಹಲ ಸೃಷ್ಟಿಸಿದವು ಮತ್ತು ಸಭಾತ್ಯಾಗ ಮಾಡಿ ಸದನದಿಂದ ಹೊರ ನಡೆದರು.

ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ವರದಿಯನ್ನು ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ಜಗದೀಪ್ ಧಂಖರ್ ಅವರು, “ಭಾರತದ ರಾಷ್ಟ್ರಪತಿಗಳಿಗೆ ಅಗೌರವ ತೋರಿಸಬೇಡಿ…” ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಸದಸ್ಯರಿಗೆ ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ಹೇಳಬೇಕು ಎಂದು ಒತ್ತಾಯಿಸಿದರು.

ಆದಾಗ್ಯೂ, ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಲೇ ಇದ್ದರು. ಹೀಗಾಗಿ ಧಂಖರ್ ಅವರು ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!