spot_img
Monday, March 16, 2026
spot_img

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆ ಸುಕ್ರಿ ಬೊಮ್ಮೇಗೌಡ ವಿಧಿವಶ

ಜನಪ್ರತಿನಿಧಿ (ಕಾರವಾರ) : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಸ್ಥಳದಲ್ಲೇ ಕಟ್ಟಿ ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮೇಗೌಡ ಇಂದು(ಗುರುವಾರ) ನಸುಕಿನ ಜಾವ ನಿಧನರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮೇಗೌಡ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು ಮುಂಜಾನೆ 4 ಗಂಟೆ ಸಮಯಕ್ಕೆ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಸುಕ್ರಿ ಬೊಮ್ಮೇಗೌಡ ಅವರು ಇದೀಗ ಇಬ್ಬರು ಮೊಮ್ಮಕ್ಕಳು ಓರ್ವ ಸೊಸೆಯನ್ನು ಅಗಲಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮೇಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದರು. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳು ಕಂಠಪಾಟವಾಗಿದ್ದವು. ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.

ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮೇಗೌಡ ನೀಡಿರುವ ಕೊಡುಗೆ ಗುರುತಿಸಿ, 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿ ಸುಕ್ರಿ ಬೊಮ್ಮೇಗೌಡ ಅವರನ್ನು ಅರಸಿಕೊಂಡು ಬಂದಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!