spot_img
Monday, March 16, 2026
spot_img

ಛತ್ರಪತಿ ಶಿವಾಜಿ ಮಹಾರಾಜರ ರಾಜ್ಯಭಾರ ನೀತಿ ಇಂದಿಗೂ ಪ್ರಸ್ತುತ-ಗೋವಾ ಸಿ.ಎಂ ಡಾ.ಸಾವಂತ್

ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ ಕಾರ್ಯಕ್ರಮ

ಕುಂದಾಪುರ : ದೇವರು ಉಳಿದರೆ ಧರ್ಮ ಉಳಿಯುತ್ತದೆ. ಧರ್ಮ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂಬುದನ್ನು ಮನಗಂಡಿದ್ದ ಶಿವಾಜಿ ಮಹಾರಾಜರು ದೇವರು, ದೇಶ ಮತ್ತು ಧರ್ಮ ಈ ಮೂರು ನೀತಿಗಳ ಮೇಲೆ ಛತ್ರಪತಿ ಶಿವಾಜಿ ಮಹಾರಾಜರು ರಾಜ್ಯಭಾರ ಮಾಡಿದ್ದರು. ಶಿವಾಜಿ ಮೊಘಲರು, ಪೋರ್ಚುಗೀಸರು, ಬ್ರಿಟಿಷ್, ಡಚ್ಚರು ಇವೆಲ್ಲರ ವಿರುದ್ಧ ಹೋರಾಟ ನಡೆಸಿ ದಾಳಿಕೋರರನ್ನು ಹಿಮ್ಮೆಟ್ಟಿಸಿ ಈ ಪ್ರದೇಶಗಳಿಗೆ ಸ್ವಾತಂತ್ರ್ಯ ನೀಡುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಸಿಂಧದುರ್ಗ ಜಿಲ್ಲೆಯಿಂದ ಇಲ್ಲಿಯವರೆಗೆ ಬಂದು ಪೋರ್ಚುಗೀಸರಿಂದ ಬಸ್ರೂರು ಗ್ರಾಮವನ್ನು ಸ್ವತಂತ್ರಗೊಳಿಸಿದ್ದರು ಎಂದು ಗೋವಾ ರಾಜ್ಯದ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗರಾವ್ ಸಾವಂತ್ ಹೇಳಿದರು.

ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗ ಬಸ್ರೂರು ಇವರ ಆಶ್ರಯದಲ್ಲಿ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ನಡೆದ ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಮಕ್ಕಳಿಗೆ ಹಾಗೂ ಮುಂದಿನ ಪೀಳಿಗೆಗೆ ತಿಳಿಸುವುದು ಅತ್ಯಗತ್ಯ. ಬಸ್ರೂರಿನ ಜನರು ಫೆ.೧೩ರಂದು ಸ್ವಾತಂತ್ರ್ಯ ದಿನಾಚರಣೆ ಮಾಡುವುದು ಸಮಂಜಸವಾದುದು. ಶಿವಾಜಿ ಮಹಾರಾಜರಿಗೆ ಬಸ್ರೂರಿನ ಜನರು ಬೆಂಬಲ ನೀಡಿದ್ದರಿಂದ ಬಸ್ರೂರು ಸ್ವತಂತ್ರವಾಗಲು ಸಾಧ್ಯವಾಗಿದೆ. ಶಿವಾಜಿ ಮಹಾರಾಜರ ಕಾರ್ಯನೀತಿ ಈಗಿನ ಕೇಂದ್ರ ಸರಕಾರ ಕೂಡ ಪಾಲಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ದೇಶದಲ್ಲಿ ಮೂಲಭೂತ ಸೌಲಭ್ಯ ಅಭಿವೃದ್ಧಿ ಪಡಿಸಲು ೬೦ ವರ್ಷ ಬೇಕಾಯಿತು. ದೇಶದಲ್ಲಿ ಕಳೆದ ೬೦ ವರ್ಷಗಳಲ್ಲಿ ನೀಡಲಾಗದ ಮೂಲಭೂತ ಸೌಕರ್ಯಗಳನ್ನು ಕಳೆದ ೧೦ ವರ್ಷಗಳಲ್ಲಿ ನರೇಂದ್ರ ಮೋದಿಯವರು ನೀಡಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿಕಸಿತ ರಾಷ್ಟ್ರ ಶಿವಾಜಿ ಮಹಾರಾಜರ ಕನಸು. ಬಸ್ರೂರಿನಂತಹ ಗ್ರಾಮ ಪಂಚಾಯತ್ ಮೂಲಕ ಆರಂಭವಾಗಿರುವ ಈ ಆಂದೋಲನ ಯಶಸ್ವಿಯಾಗುವ ವಿಶ್ವಾಸವಿದೆ. ಬಸ್ರೂರಿನಲ್ಲಿ ಶಿವಾಜಿ ಮಹಾರಾಜರ ಸ್ಮಾರಕ ನಿರ್ಮಿಸಬೇಕೆಂಬ ಸ್ಥಳೀಯರ ಬೇಡಿಕೆಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಬಸ್ರೂರಿನಲ್ಲಿ ಶಿವಾಜಿ ಮಹಾರಾಜರ ನೆನಪಿಗೆ ನೇವಲ್ ಅಕಾಡೆಮಿ ಅಥವಾ ಸ್ಮಾರಕ ನಿರ್ಮಾಣ ಮಾಡಲು ನರೇಂದ್ರ ಮೋದಿ ಸರಕಾರ ಸಿದ್ಧವಿದ್ದು, ಈ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿ, ಸ್ಥಳೀಯ ಜನಪ್ರತಿನಿಧಿಗಳು ಮುಂಚೂಣಿಯಲ್ಲಿ ನಿಂತು ಈ ಕೆಲಸ ಮಾಡಬೇಕಿದೆ ಎಂದರು.
ಭಾರತೀಯ ಸಂತಸಭಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಡಾ.ಸಂದೀಪ್‌ರಾಜ್ ಮಹದೇವರಾವ್ ಮಹಿಂದ್ ಪುಣೆ ಮಾತನಾಡಿದರು. ರಾಷ್ಟ್ರೀಯವಾದಿ ನಾಟಕಕಾರ ಅಡ್ಡಂಡ ಸಿ.ಕಾರ್ಯಪ್ಪ ದಿಕ್ಸೂಚಿ ಭಾಷಣ ಮಾಡಿದರು.

ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗದ ಕಾರ್ಯದರ್ಶಿ ರಾಕೇಶ್ ಜಿ.ಕೆಳಮನೆ, ಗಂಗೊಳ್ಳಿ ವಲಯ ಪ್ರಮುಖ್ ಟಿ.ವಾಸುದೇವ ದೇವಾಡಿಗ, ಸಂಚಾಲಕ ಸುಧೀರ್ ಮೇರ್ಡಿ ಉಪಸ್ಥಿತರಿದ್ದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಯಶಪಾಲ ಸುವರ್ಣ, ಗುರ್ಮೆ ಸುರೇಶ ಶೆಟ್ಟಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸುಬ್ರಹ್ಮಣ್ಯ ಹೊಳ್ಳ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗದ ಅಧ್ಯಕ್ಷ ಉಮೇಶ ಆಚಾರ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಾರಿಕಾ ಅಶೋಕ್ ಕಾರ್ಯಕ್ರಮ ನಿರ್ವಹಿಸಿದರು.

ಗಂಗೊಳ್ಳಿಯಿಂದ ದೋಣಿ ಮೂಲಕ ಸಾಗಿಬಂದ ಶೋಭಾಯಾತ್ರೆಯು ಬಸ್ರೂರು ಮಂಡಿಕೇರಿ ಹೊಳೆಬಾಗಿಲಿನಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!