spot_img
Tuesday, March 17, 2026
spot_img

ಸಿಇಟಿ, ನೀಟ್, ಜೆಇಇ, ಸಿ.ಎ/ಸಿ.ಎಸ್ ಪರೀಕ್ಷೆಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಕುಂದಾಪುರದ ಸುಜ್ಞಾನ ಪಿ.ಯು ಕಾಲೇಜು

ಕುಂದಾಪುರ: ಶಿಕ್ಷಣ ಕ್ಷೇತ್ರದಲ್ಲಿ 30 ವರ್ಷಕ್ಕೂ ಅಧಿಕ ಅನುಭವವುಳ್ಳ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ ಪದವಿ ಗಳಿಸಿರುವ ಡಾ.ರಮೇಶ ಶೆಟ್ಟಿ ಯವರ ಅಧ್ಯಕ್ಷತೆಯ, ಸಿ.ಎ/ಸಿ.ಎಸ್ ತರಬೇತಿಗೆ ಹೆಸರಾದ ಶಿಕ್ಷಪ್ರಭಾ ಸಂಸ್ಥೆಯ ಸ್ಥಾಪಕರುಗಳಾದ ಪ್ರತಾಪಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಕಾರ್ಯದರ್ಶಿ ಮತ್ತು ಖಜಾಂಚಿಗಳಾದ ಸುಜ್ಷಾನ ಎಜುಕೇಶನ್ ಟ್ರಸ್ಟ್ ಕುಂದಾಪುರದ ಯಡಾಡಿ-ಮತ್ಯಾಡಿಯಲ್ಲಿ ತನ್ನ ಸ್ವಂತ ಜಾಗದಲ್ಲಿ ಸುಜ್ಞಾನ ಪಿ.ಯು ಕಾಲೇಜು ಎನ್ನುವ ಸಂಸ್ಥೆಯನ್ನು ಆರಂಭಿಸಿ ಈಗಾಗಲೇ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ 2024-25 ರಿಂದಲೇ ಸಿಇಟಿ, ನೀಟ್, ಜೆಇಇ, ತರಬೇತಿಯನ್ನು ನೀಡುತ್ತಾ ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿ.ಎ/ಸಿ.ಎಸ್ ತರಬೇತಿಯನ್ನು ನೀಡಿ ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿಗಳನ್ನು ಸನ್ನದ್ಧಗೊಳಿಸುತ್ತಿದೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚಿನ ಆದ್ಯತೆ:
ಸುಜ್ಞಾನ ಎಜುಕೇಶನಲ್ ಟ್ರಸ್ಟ್ 2021 ರಿಂದಲೇ ಕುಂದಾಪುರದಲ್ಲಿ ಸಿಇಟಿ, ನೀಟ್, ಜೆಇಇ ಪರೀಕ್ಷೆ ಮತ್ತು ಸಿ.ಎ/ಸಿ.ಎಸ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ನೀಡಿ ಆತ್ಯಧಿಕ rank ಗಳನ್ನು ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಂಸ್ಥೆಯಲ್ಲಿ ದೇಶದ ನಾನಾ ಭಾಗದ ಹೆಸರಾಂತ ಶಿಕ್ಷಣ ಸಂಸ್ಥೆಯಲ್ಲಿ ಜೆಇಇ, ನೀಟ್ ತರಬೇತುದಾರರಾಗಿ ಕಾರ್ಯ ನಿರ್ವಹಿಸಿರುವ ಅನುಭವವುಳ್ಳ ಬೋಧಕ ಸಿಬ್ಬಂದಿಗಳ ತಂಡ ಸಂಸ್ಥೆಯ ವಿದ್ಯಾರ್ಥಿಗಳಿಗೆ ನಿರಂತರ ತರಬೇತಿ ನೀಡಲು ಸಿದ್ದವಾಗಿದೆ.

ಹಾಸ್ಟೆಲ್ ಸೌಲಭ್ಯ:
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ 3ನೇ ತರಗತಿಯಿಂದ 12ನೇ ತರಗತಿಯ ತನಕ ಹಾಸ್ಟೆಲ್ ಸೌಲಭ್ಯದ ಅವಕಾಶವಿದ್ದು ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಆಧುನಿಕ ಸೌಲಭ್ಯವುಳ್ಳ ಹಾಸ್ಟೆಲ್ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಹಾಸ್ಟೆಲ್ ನಲ್ಲಿ Residential Teacher ಕೂಡ ಇರುವುದರಿಂದ ವಿದ್ಯಾರ್ಥಿಗಳಿಗೆ ತಮ್ಮ ವಿಷಯವಾರು ಸಂಶಯ ನಿವಾರಣೆಗೆ ಅನುಕೂಲವಾಗುತ್ತದೆ.

ಉಚಿತ ಶಿಕ್ಷಣದ ಅವಕಾಶ:
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ 40 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶವಿದ್ದು ಸಿಇಟಿ, ನೀಟ್, ಜೆಇಇ ತರಬೇತಿಯನ್ನು ಕೂಡ ಉಚಿತವಾಗಿ ನೀಡಲಾಗುವುದು, ಆಯ್ದ 40 ವಿದ್ಯಾರ್ಥಿಗಳಿಗೆ ಅವಕಾಶವಿದ್ದು ಆಸಕ್ತರು ಸಂಸ್ಥೆಯ ದೂರವಾಣಿ ಸಂಖ್ಯೆ 9964291755 / 8217527362 / 9845925983ಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಮುಖ್ಯಸ್ಥರು ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!