spot_img
Wednesday, April 1, 2026
spot_img

ಯುವ ಬಂಟರ ಸಂಘ: ಸ್ವಾವಲಂಬಿ ಮಹಿಳೆ ‘ಉಪ್ಪಿನಕಾಯಿ ಅಜ್ಜಿ’ಗೆ ಸನ್ಮಾನ

ಕುಂದಾಪುರ: ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಶ್ರೇಷ್ಠ ಕವಯತ್ರಿ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಉಪ್ಪಿನಕಾಯಿ ಅಜ್ಜಿ ಎಂದೇ ಖ್ಯಾತರಾದ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಐರ್‌ಬೈಲು ನಿವಾಸಿ ಗುಲಾಬಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಪರವಾಗಿ ಸಂಘದ ಗೌರವಾಧ್ಯಕ್ಷರಾದ ವತ್ಸಲಾ ದಯಾನಂದ ಶೆಟ್ಟಿ ಅವರ ಸ್ವಗ್ರಹದಲ್ಲಿ ಸನ್ಮಾನಿಸಿದರು. ಯುವ ಬಂಟರ ಸಂಘ ಗ್ರಾಮೀಣ ಪ್ರದೇಶದಲ್ಲಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಇಂತಹ ಗ್ರಾಮೀಣ ಪ್ರದೇಶದ ಮಹಿಳೆಯನ್ನು ಗುರುತಿಸಿ ಗೌರವಿಸುವುದು, ಶ್ಲಾಘನೀಯ. ಇಂತಹ ಕೆಲಸಗಳನ್ನು ಎಲ್ಲಾ ಸಂಘ ಸಂಸ್ಥೆಗಳು ಮಾಡಿದಾಗ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಅವರು ಹೇಳಿದರು.

ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಗೋಳಿಯಂಗಡಿ ಉಪಸ್ಥಿತರಿದ್ದು, ಡಾ. ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!