spot_img
Wednesday, April 1, 2026
spot_img

ಕೆಎಎಸ್ ಅಧಿಕಾರಿಗಳ ವರ್ಗಾವಣೆ : ಉಡುಪಿಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ನೇಮಕ

ಜನಪ್ರತಿನಿಧಿ(ಬೆಂಗಳೂರು) : ಕರ್ನಾಟಕ ಆಡಳಿತ ಸೇವೆಯ ಹಿರಿಯ ಶ್ರೇಣಿಯ ಆಡಳಿತ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಇಂದು(ಶುಕ್ರವಾರ) ಆದೇಶ ಹೊರಡಿಸಿದೆ.

ಉಡುಪಿಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯನ್ನಾಗಿ ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗದ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಅವರನ್ನು ರಾಜ್ಯ ಸರ್ಕಾರ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಿದೆ.

ಸರ್ಕಾರದ ಅಪರ ಕಾರ್ಯದರ್ಶಿ-4, ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ಸರ್ಕಾರ ಸಚಿವಾಲಯ, ಬೆಂಗಳೂರು -ಖಾಲಿ ಹುದ್ದೆಗೆ ಸಿಆಸು ಇಲಾಖೆ (ಇ-ಆಡಳಿತ), ಬೆಂಗಳೂರಿನ   ಕಾರ್ಯಕ್ರಮ ನಿರ್ದೇಶಕರಾದ ಡಾ|| ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು, ಮುಖ್ಯ ಜಾಗೃತಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು -ಖಾಲಿ ಹುದ್ದೆಗೆ ಕೆ.ಎ.ಎಸ್ (ಸೂಪರ್ ಟೈಂ ಸೈಲ್ ಅಧಿಕಾರಿ ಸ್ಥಳ ನಿರೀಕ್ಷಣೆಯಲ್ಲಿದ್ದ ಡಾ‌. ಸೌಜನ್ಯ ಎ. ಅವರನ್ನು, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಕೌಶಲ್ಯ), ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು -ಖಾಲಿ ಹುದ್ದೆಗೆ ಕಾನೂನು ಮಾಪನಶಾಸ್ತ್ರ ಇಲಾಖೆ, ಬೆಂಗಳೂರಿನ ನಿಯಂತ್ರಕರಾಗಿದ್ದ  ಅನಿತಾಲಕ್ಷ್ಮೀ ಅವರನ್ನು, ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರ, ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್.ಹೆಚ್.ಎ.ಐ), ಮೈಸೂರು-ಮಡಿಕೇರಿ ರಸ್ತೆ, ಮೈಸೂರು – ಶ್ರೀಮತಿ ಚಂದ್ರಮ್ಮ ವೈ ಎನ್ ಇವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಶೈಲಜಾ ವಿ‌ಆರ್. ಕೆಎಎಸ್ ಅವರನ್ನು, ಉಪ ಕಾರ್ಯದರ್ಶಿ-2 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು-ಖಾಲಿ ಹುದ್ದೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರಿನ ಜಂಟಿ ಆಯುಕ್ತರಾಗಿದ್ದ (ಘನ ತ್ಯಾಜ್ಯ ನಿರ್ವಹಣೆ) ಪ್ರತಿಭಾ ಆರ್ ಅವರನ್ನು, ಉಪ ವಿಭಾಗಾಧಿಕಾರಿ, ಪುತ್ತೂರು ಉಪವಿಭಾಗ, ದಕ್ಷಿಣ ಕನ್ನಡ ಜಿಲ್ಲೆ- ಖಾಲಿ ಹುದ್ದೆಗೆ  ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕುಮಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು, ಉಪ ಪ್ರಧಾನ ವ್ಯವಸ್ಥಾಪಕರು, ಕೆ.ಯು.ಐ.ಡಿ.ಎಫ್.ಸಿ, ಬೆಂಗಳೂರು – ಖಾಲಿ ಹುದ್ದೆಗೆ ಉಪ ವಿಭಾಗಾಧಿಕಾರಿ, ಭಟ್ಕಳ ಉಪವಿಭಾಗ, ಉತ್ತರ ಕನ್ನಡ ಜಿಲ್ಲೆಯ ಡಾ. ನಯನ ಎನ್ ಅವರನ್ನು, ವಿಶೇಷ ಭೂಸ್ವಾಧೀನಾಧಿಕಾರಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ – ಖಾಲಿ ಹುದ್ದೆಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ, ಧಾರವಾಡ ಜಿಲ್ಲೆಯ ಅಧಿಕಾರಿ ಅನುರಾಧ ವಸ್ತ್ರದ ಅವರನ್ನು, ಧಾರವಾಡ ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಕುಲಸಚಿವರ ಖಾಲಿ ಹುದ್ದೆಗೆ ಜಿಲ್ಲಾ ನಗರಾಭಿವೃದ್ಧಿ ಕೋಶ, ಧಾರವಾಡ ಹುದ್ದೆಯ ಸ್ಥಳನಿಯುಕ್ತಿ ಆದೇಶದಲ್ಲಿರುವ ಯೋಜನಾ ನಿರ್ದೇಶಕಾರದ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಅವರನ್ನು ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹುಬ್ಬಳ್ಳಿಯ  ಉಪ ಆಯುಕ್ತರ (ಕಂದಾಯ) ಹುದ್ದೆಗೆ ಅಶೋಕ್ ಈರಪ್ಪ ಗುರಾಣಿ ಅವರನ್ನು ನೇಮಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!