spot_img
Wednesday, April 1, 2026
spot_img

ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ವಿರುದ್ಧ ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಜನಪ್ರತಿನಿಧಿ (ಬೆಂಗಳೂರು) : ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಎಬಿವಿಪಿಯ 16 ಮಂದಿ ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅನುಮತಿ ಪಡೆಯದೆ ನಿನ್ನೆ(ಶುಕ್ರವಾರ) ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ನಮ್ಮ ಮೆಟ್ರೋ ದರ ಹೆಚ್ಚಳ

ಈಗಾಗಲೇ ಮೆಟ್ರೋ ದರ ಏರಿಕೆಯನ್ನು ಜನರು ಖಂಡಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಪ್ರಯಾಣಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದರು. ಬಿಎಂಆರ್​ಸಿಎಲ್ 45% ರಿಂದ 50% ರಷ್ಟು ದರ ಏರಿಕೆ ಮಾಡಿದ್ದೇವೆ ಎಂದು ಹೇಳುತ್ತು. ಆದರೆ, 100% ರಷ್ಟು, ಅಂದ್ರೆ ಒನ್​ ಟು ಡಬಲ್ ಏರಿಕೆಯಾಗಿತ್ತು. ರೈತರು, ಕನ್ನಡಪರ ಹೋರಾಟಗಾರರು,ಪ್ರಗತಿಪರ ಸಂಘಟನೆಗಳು ಮತ್ತು ಪ್ರಯಾಣಿಕರು ಸೇರಿದಂತೆ ಪ್ರಯಾಣಿಕರು ಬಿಎಂಆರ್​ಸಿಎಲ್ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಸಾರ್ವಜನಿಕರ ಆಕ್ರೋಶ

ಇನ್ನು ಮೆಟ್ರೋ ದರ ಯಥೇಚ್ಚಾಗಿ ಏರಿಕೆಯಾಗಿದ್ದಕ್ಕೆ ಪ್ರಯಾಣಿಕರು ಆಕ್ರೋಶಗೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರು ಮಾಡಿದ್ದರು. ಇದರಿಂದ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ಯಾವ ಯಾವ ಸ್ಟೇಜ್​ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ ಎಂದು ಪರಿಶೀಲಿಸಿ ಕೂಡಲೇ ಕಡಿತಗೊಳಿಸುವಂತೆ ಬಿಎಂಆರ್​ಸಿಎಲ್​ಗೆ ಸೂಚನೆ ನೀಡಿದ್ದರು.

ಪ್ರಯಾಣಿಕರ ಸಂಖ್ಯೆ ಇಳಿಕೆ

ಟಿಕೆಟ್ ದರ ಏರಿಕೆಯಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಪ್ರತಿದಿನ ಮೆಟ್ರೋದಲ್ಲಿ 8 ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ ದರ ಏರಿಕೆ ಆದ ಮೇಲೆ ಪ್ರತಿದಿನ 6 ರಿಂದ 7 ಲಕ್ಷ ಪ್ರಯಾಣಿಕರು ಮಾತ್ರ ಸಂಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!