spot_img
Wednesday, April 1, 2026
spot_img

ಕಾರವಾರ : ಕಾಳಿ ನದಿ ಸೇತುವೆ ಪಿಲ್ಲರ್‌ ದಿಢೀರ್‌ ಕುಸಿತ | ತಪ್ಪಿದ ಬಾರಿ ಅನಾಹುತ

ಜನಪ್ರತಿನಿಧಿ (ಕಾರವಾರ) : ಕಾರವಾರದ ಸದಾಶಿವಗಢದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಳೆಯ ಸೇತುವೆಯ ಒಂದು ಭಾಗ ನಿನ್ನೆ(ಶುಕ್ರವಾರ) ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ. ‌

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಈ ಸೇತುವೆ ಸದ್ಯ ಬಳಕೆಯಲ್ಲಿಲ್ಲ ಮತ್ತು ದುರಸ್ತಿ ಕಾರ್ಯವೂ ನಡೆಯುತ್ತಿತ್ತು.

ಪಿಲ್ಲರ್ ಒಂದು ಭಾಗ ಕುಸಿದು ಬಿದ್ದರಿಂದ ಸ್ಲ್ಯಾಬ್​ ಮೇಲೆದ್ದಿದೆ. ಕಳೆದ ವರ್ಷ ಆಗಸ್ಟ್ 7 ರಂದು ಕಾಳಿ ಸೇತುವೆ ಕುಸಿತಗೊಂಡಿತ್ತು. ಕುಸಿದು ಬಿದ್ದಿದ್ದ ಕಾಳಿ ಸೇತುವೆ ದುರಸ್ತಿ ಮಾಡುತ್ತಿದ್ದಾಗ ಫಿಲ್ಲರ್ ಕುಸಿದು ಸ್ಲ್ಯಾಬ್ ಸಹಿತ ನದಿಗೆ ಬಿದ್ದ ಪರಿಣಾಮ ಹೊಸ ಸೇತುವೆಗೆ ಸಂಭವಿಸಬಹುದಾದ ಬಹುದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಗುರುವಾರ ಇದೇ ಸ್ಲ್ಯಾಬ್ ಮೇಲೆ 4-5 ಕಾರ್ಮಿಕರು ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಕಳೆದ 4 ತಿಂಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಕೆಲ ದಿನ ರಾತ್ರಿ 12 ಗಂಟೆಯವರೆಗೂ ಕೆಲಸ ನಡೆಸುತ್ತಿದ್ದರು. ಈಗಾಗಲೇ ಶೇ.70ರಷ್ಟು ತೆರವು ಕಾರ್ಯಾಚರಣೆ ಪೂರ್ಣಗೊಳಿಸಲಾಗಿದೆ.

ಕಳೆದ ಆಗಸ್ಟ್ 7 ರಂದು ಮಳೆಯ ಅಬ್ಬರಕ್ಕೆ ಕಾಳಿ ಸೇತುವೆ ಕುಸಿದು ಬಿದ್ದಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!