spot_img
Wednesday, April 1, 2026
spot_img

ಕರ್ನಾಟಕ ಇತಿಹಾಸ ಪರಿಷತ್ತು ಮಹಾ ಅಧಿವೇಶನದ ಸರ್ವಾಧ್ಯಕ್ಷರಾಗಿ ಡಾ.ಕೇಶವನ್ ವೆಳುತ್ತಾಟ್

ಕುಂದಾಪುರ: ಭಾರತೀಯ ಇತಿಹಾಸ ತಜ್ಞ, ಶಿಕ್ಷಣ ತಜ್ಞ, ದೆಹಲಿಯ ಕೇಶವನ್ ವೆಳುತ್ತಾಟ್ ಅವರನ್ನು ಕುಂದಾಪುರ ಭಂಡಾರ್ ಕಾರ್‍ಸ್ ಕಾಲೇಜಿನಲ್ಲಿ ಫೆ. 21 ರಿಂದ ಮೂರು ದಿನಗಳ ಕಾಲ ನಡೆಯುವ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನ”ದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಕೇರಳ ಮೂಲದ ಇವರು, ಮಧ್ಯಯುಗದ ದಕ್ಷಿಣ ಭಾರತೀಯ ಇತಿಹಾಸದಲ್ಲಿ ವಿಶೇಷ ಪರಿಣಿತರು. ಶಾಸನ ತಜ್ಞರು. ಸಂಸ್ಕೃತ, ತಮಿಳು, ಕನ್ನಡ, ಮಲೆಯಾಳಂ ಭಾಷೆ ಅರಿತಿರುವ ಇವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಆನಂತರ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದರು. ಇವರು ದೇಶದ ಹಲವು ವಿಶ್ವ ವಿದ್ಯಾನಿಲಯಗಳಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿದ್ದಾರೆ. ಹಲವು ಗ್ರಂಥಗಳನ್ನು ಬರೆದಿದ್ದಾರೆ. ಕ್ಯಾಲಿಕಟ್ ವಿ.ವಿ.ಯಿಂದ ಸ್ನಾತ್ತಕೋತ್ತರ ಪದವಿ ಹಾಗೂ ಡಾಕ್ಟರೇಟ್, ಜವಹರಲಾಲ್ ನೆಹರು ವಿ.ವಿ. ಯಿಂದ ಎಂ.ಫಿಲ್. ಪದವಿ ಪಡೆದ ಇವರು ದೇಶದ ಶ್ರೇಷ್ಠ ಇತಿಹಾಸ ಹಾಗೂ ಶಿಕ್ಷಣ ತಜ್ಞ, ಶಾಸನತಜ್ಞರಲ್ಲಿ ಪ್ರಮುಖರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!