spot_img
Wednesday, April 1, 2026
spot_img

ಮೂಡುತಾರೆಬೈಲು: ಪಡುಕೋಣೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ 

ಕುಂದಾಪುರ: ಪಡುಕೋಣೆ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡು ತಾರೆಬೈಲು ಇಲ್ಲಿ ಫೆ.18 ಮಂಗಳವಾರದಂದು ಜರುಗಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶ್ರುತಿ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ ಉದ್ಘಾಟಿಸಿದರು. ಜಿಲ್ಲಾ ಯೋಜನಾಧಿಕಾರಿ ಜ್ಯೋತಿ ಕಲಿಕಾ ಹಬ್ಬದ ಲೋಗೋಗಳನ್ನು ಉದ್ಘಾಟಿಸಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಪ್ರದೀಪ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಿಂಗಾರಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಪೂಜಾರಿ, ವಿಘ್ನೇಶ್ ಗಾಣಿಗ, ಮುಖ್ಯ ಶಿಕ್ಷಕ ಜಯರಾಮ್ ಚಾತ್ರ, ಸಿ ಆರ್‌ಪಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ತಿಮ್ಮಪ್ಪ ಶೆಟ್ಟಿ ನಿರೂಪಿಸಿದರು. ಶಿಕ್ಷಕ ಪ್ರಮೋದ್ ಕುಮಾರ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಹೊಸಾಡು ಕ್ಲಸ್ಟರ್ ನ ಭಾಗಿರತಿ ಮೋವಾಡಿ ಶಾಲೆ, ವಸಂತಿ ಕುಂದಬಾರಂದಾಡಿ ಶಾಲೆ ಹಾಗೂ ದೀಪ ಶೆಟ್ಟಿ ಬಾರಂದಾಡಿ ಶಾಲೆ ಇವರು ಸಹಕರಿಸಿದರು.

ಕಲಿಕಾ ಹಬ್ಬದ ಕೇಂದ್ರಬಿಂದುಗಳಾದ ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಉಲ್ಲಾಸದಿಂದ ವಿವಿಧ ಕಲಿಕಾ ಚಟುವಟಿಕೆಗಳಲ್ಲಿ ಹಾಗೂ ಮೋಜಿನ ಆಟಗಳಲ್ಲಿ ಪಾಲ್ಗೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!