spot_img
Thursday, March 20, 2025
spot_img

ರಾಜ್ಯದಲ್ಲಿ ಕುಟುಂಬ ರಾಜಕಾರಣ, ಸ್ವಜನಪಕ್ಷಪಾತ ಕೊನೆಗೊಳ್ಳಬೇಕು‌ : ಶಿಸ್ತು ಸಮಿತಿಗೆ ಯತ್ನಾಳ್‌ ಉತ್ತರ

ಜನಪ್ರತಿನಿಧಿ (ಬೆಂಗಳೂರು) : ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ನೋಟಿಸ್‌ಗೆ ಉತ್ತರ ಕಳುಹಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಸಮರ್ಥರನ್ನು ಆಯ್ಕೆ ಮಾಡಬೇಕು ಎಂದಿದ್ದಾರೆ.

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು, ಯತ್ನಾಳ ಅವರಿಗೆ ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ್ದರ ಸಂಬಂಧ ಇದೇ ಫೆ.10ರಂದು ನೋಟಿಸ್‌ ನೀಡಿತ್ತು. 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು. ನೋಟಿಸ್ ದೊರೆತ ಮರುದಿನವೇ ಅವರು ಐದು ಪುಟಗಳಷ್ಟು ವಿವರವಾದ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ನಾನು ಯಾವುದೇ ಬಣ ರಾಜಕಾರಣ ಮಾಡಿಲ್ಲ. ಪಕ್ಷದ ಚೌಕಟ್ಟಿನಲ್ಲೇ ವಕ್ಫ್ ಹೋರಾಟ ನಡೆಸಿದ್ದೇವೆ. ಪಕ್ಷಕ್ಕೆ ಧಕ್ಕೆಯಾಗುವಂತಹ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಉತ್ತರಿಸಿದ್ದಾರೆ’ ಎಂದು ತಿಳಿಸಿವೆ.

‘ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ಹಿರಿಯರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಈ ಕಾರಣದಿಂದ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಮತ್ತು ಸ್ವಜನಪಕ್ಷಪಾತ ಕೊನೆಗೊಳ್ಳಬೇಕು ಎಂದು ಯತ್ನಾಳ ಪ್ರತಿಪಾದಿಸಿದ್ದಾರೆ’ ಎಂದು ತಿಳಿಸಿವೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!