spot_img
Thursday, April 2, 2026
spot_img

Outgoing ಸಿಎಂ ಸಿದ್ದರಾಮಯ್ಯನವರೇ……. ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ : ಆರ್‌. ಅಶೋಕ್‌

ಜನಪ್ರತಿನಿಧಿ (ಬೆಂಗಳೂರು) : ಮುಡಾ ಹಗರಣದಿಂದ ಬಚಾವಾಗಲು, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಸಂಪೂರ್ಣವಾಗಿ busy ಆಗಿರುವ outgoing ಸಿಎಂ ಸಿದ್ದರಾಮಯ್ಯನವರಿಗೆ ಪಾಪ ಮೂರು ತಿಂಗಳಿನಿಂದ ಅನ್ನಭಾಗ್ಯದ ಹಣ, ಗೃಹಲಕ್ಷ್ಮಿ ಹಣ ಪಾವತಿ ಬಾಕಿ ಇರುವುದೇ ಗೊತ್ತಿಲ್ಲವಂತೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.‌ ಅಶೋಕ್‌ ವ್ಯಂಗ್ಯವಾಡಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಆರ್.‌ ಅಶೋಕ್‌ ಅವರು, Outgoing ಸಿಎಂ ಸಿದ್ದರಾಮಯ್ಯನವರೇ, ತಮಗೆ ಗೊತ್ತಿಲ್ಲದೆ ತಮ್ಮ ಸರ್ಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು. ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಯಾವ್ಯಾವ ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ, ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರೆಂಟಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!