spot_img
Wednesday, April 1, 2026
spot_img

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಹೇಳಿಕೆ | ಇದೇನಾ ಮತದಾರರಿಗೆ ನೀವು ಕೊಡುವ ಗೌರವ? : ಅಶೋಕ್‌

ಜನಪ್ರತಿನಿಧಿ (ಬೆಂಗಳೂರು) : ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ ಎಂಬ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರ ಉಡಾಫೆಯ ಉತ್ತರ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಸಚಿವ ಜಾರ್ಜ್ ವಿರುದ್ಧ ವಾಗ್ದಾಳಿ ನಡೆಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ? ಎಂದು ಪ್ರಶ್ನಿಸಿದ್ದಾರೆ.

ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ ಮತದಾರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ? ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ ಎಂದು ಆಗ್ರಹಿಸಿದ್ದಾರೆ.

ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ. ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರೆಂಟಿ ಎಂದು ಎಚ್ಚರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!