spot_img
Wednesday, April 1, 2026
spot_img

ಫೆ.25 ಮತ್ತು 26 ತೆಕ್ಕಟ್ಟೆ ವಿಶ್ವ ವಿನಾಯಕ ಶಾಲೆಯಲ್ಲಿ ಇಸ್ರೋ ಪ್ರಾಯೋಜಿತ ‘SPACE-ON-WHEELS’ ವಿಜ್ಞಾನ ವಸ್ತು ಪ್ರದರ್ಶನ

ಜನಪ್ರತಿನಿಧಿ ವಾರ್ತೆ: ಕುಂದಾಪುರ: ತೆಕ್ಕಟ್ಟೆಯ ವಿಶ್ವ ವಿನಾಯಕ ನ್ಯಾಷನಲ್ ಇಂಗ್ಲೀಷ್ ಮಿಡಿಯಂ ಶಾಲೆಯಲ್ಲಿ ಫೆ.25 ಮತ್ತು 26ರಂದು ಇಸ್ರೋ ಬೆಂಗಳೂರು ಪ್ರಾಯೋಜಿತ ‘SPACE-ON-WHEELS’ ವಿಜ್ಞಾನ ವಸ್ತು ಪ್ರದರ್ಶನವನ್ನು ವಿಶ್ವವಿನಾಯಕ ಸಿಬಿ‌ಎಸ್‌ಇ ಸ್ಕೂಲ್ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಇಸ್ರೋ ಸಂಸ್ಥೆಯ ವಿಜುವಲ್ ಡಾಕ್ಯೂಮೆಂಟೇಶನ್ ಮತ್ತು ಔಟ್ ರಿಚ್ ಘಟಕದ ಮುಖ್ಯಸ್ಥರಾದ ಪಿ.ವಿ.ಎನ್ ಮೂರ್ತಿಯವರ ನೇತೃತ್ವದಲ್ಲಿ ಆಕಾಶಕಾಯಗಳ ಮಾಹಿತಿಯನ್ನೊಳಗೊಂಡ ಮಾದರಿಗಳ ಎರಡು ಬಸ್ಸುಗಳನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿ ಇಡಲಾಗುವುದು ಎಂದು ವಿಶ್ವವಿನಾಯಕ ಸಿಬಿ‌ಎಸ್‌ಇ ಸ್ಕೂಲ್ ಪ್ರಾಂಶುಪಾಲರಾದ ನಿತಿನ್ ಡಿ ಅಲ್ಮೇಡಾ ತಿಳಿಸಿದರು.

ಅವರು ಕುಂದಾಪುರದ ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದರು.

ಫೆ.25 ಬೆಳಿಗ್ಗೆ 9.30ಕ್ಕೆ ಉದ್ಘಾಟನೆ ನಡೆಯಲಿದೆ. ಮುಖ್ಯ ಅತಿಥಿಯಾಗಿ ವಿದ್ಯಾಂಗ ಉಪ ನಿರ್ದೇಶಕರಾದ ಗಣಪತಿ ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಇಸ್ರೋದ ಮುಖ್ಯಸ್ಥರಾದ ಪಿ.ವಿ.ಎನ್ ಮೂರ್ತಿ, ದುರ್ಗಾಪರಮೇಶ್ವರಿ ಎಜ್ಯೂಕೇಶನ್ ಟ್ರಸ್ಟ್ ಬೆಂಗಳೂರು ಇದರ ನಿರ್ದೇಶಕರಾದ ಪ್ರೊ.ಡಾ.ಜಯರಾಮ ಶೆಟ್ಟಿ ಎಸ್, ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭನಾ ಶೆಟ್ಟಿ, ಶಾಲೆಯ ಶೈಕ್ಷಣಿಕ ನಿರ್ದೇಶಕರಾದ ದಿವಾಕರ ಶೆಟ್ಟಿ ಎಚ್ ಭಾಗವಹಿಸಲಿದ್ದಾರೆ. ಶಾಲೆಯ ಆಡಳಿತ ನಿರ್ದೇಶಕರಾದ ಎಂ.ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಕುಂದಾಪುರ ವಲಯ, ಬ್ರಹ್ಮಾವರ ಶೈಕ್ಷಣಿಕ ವಲಯದ 6ನೇ ತರಗತಿಯಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಈ ವಿಜ್ಞಾನ ವಸ್ತುಪ್ರದರ್ಶನ ವೀಕ್ಷಿಸಲು ಅವಕಾಶಕ್ಕಾಗಿ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರವಾನಿಗೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಲಘು ಉಪಹಾರ ಹಾಗೂ ವೈದ್ಯಕೀಯ ಸೇವೆಯ ಸೌಲಭ್ಯವನ್ನು ಒದಗಿಸಲಾಗುವುದು. ಸ್ಥಳೀಯ ಸರಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಕರೆತರಲು ಮತ್ತು ಮರಳಿ ಬಿಟ್ಟು ಬರಲು ಶಾಲೆಯ ವತಿಯಿಂದ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳಿಗೆ ಆಕಾಶ ಕಾಯಗಳ ಮಾಹಿತಿಯೊಂದಿಗೆ, ಇಸ್ರೋ ಸಂಸ್ಥೆಯ ಕಾರ್ಯವೈಖರಿ ಹಾಗೂ ಉದ್ಯೋಗವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಬಹಳ ಮಾರ್ಗದರ್ಶಿಯಾಗಲಿದೆ ಎಂದರು. ಇದು ಕೇವಲ ವಿದ್ಯಾರ್ಥಿಗಳಿಗೆ ಮಾತ್ರ ಅಲ್ಲದೆ ಸಾರ್ವಜನಿಕರಿಗೂ ವೀಕ್ಷಣೆಗೆ ಮುಕ್ತ ಅವಕಾಶ ನೀಡಲಾಗಿದೆ. ಫೆ.೨೫ರಂದು ಬೆಳಿಗ್ಗೆ ೯.೩೦ರಿಂದ ಸಂಜೆ ೪ ಗಂಟೆಯ ತನಕ ಹಾಗೂ ಫೆ.೨೬ರಂದು ಬೆಳಿಗ್ಗೆ ೯.೩೦ರಿಂದ ೧೨ ಗಂಟೆಯವರೆಗೆ ಈ ವಿಜ್ಞಾನ ವಸ್ತು ಪ್ರದರ್ಶನವು ನಡೆಯಲಿದೆ ಎಂದರು.

ಶಾಲೆಯ ಆಡಳಿತ ನಿರ್ದೇಶಕರಾದ ಎಂ.ಪ್ರಭಾಕರ ಶೆಟ್ಟಿ ಮಾತನಾಡಿ, ಇದೊಂದು ವಿಶೇಷವಾದ ವಿಜ್ಞಾನ ವಸ್ತು ಪ್ರದರ್ಶನವಾಗಿದೆ. ಇಸ್ರೋದ ಬಗ್ಗೆ ಸಾಕಷ್ಟು ಕುತೂಹಲವಿರುತ್ತದೆ. ಅಲ್ಲಿನ ವಿಜ್ಞಾನಿಗಳೇ ಇಲ್ಲಿ ಮಾಹಿತಿ ನೀಡಲಿದ್ದಾರೆ. ವಿಜ್ಞಾನ, ಆಕಾಶಕಾಯಗಳ ಬಗ್ಗೆ ವಿಶೇಷವಾದ ಮಾಹಿತಿ ಸಿಗಲಿದೆ. ಮಾತ್ರವಲ್ಲ ಇಸ್ರೋದಲ್ಲಿ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಲ್ಲಿ ಉದ್ಯೋಗವಕಾಶಗಳನ್ನು ಹೇಗೆ ಪಡೆಯಬಹುದು, ಆರ್ಹತೆಗಳ ಬಗ್ಗೆ ತಿಳಿಸಲಿದ್ದಾರೆ. ಹಾಗಾಗಿ ಈ ಅಪರೂಪದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಬೇಕು ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!