spot_img
Wednesday, April 1, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಅವ್ಯವಹಾರ : ಫೆ.22ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನೆಡೆದಿದೆ ಎನ್ನಲಾದ ಬಹುಕೋಟಿ ಹಗರಣದ ತನಿಖೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಸಂಘದ ನೇತೃತ್ವದಲ್ಲಿ ಬ್ರಹ್ಮಾವರದಲ್ಲಿ ಫೆ.೨೨ ಶನಿವಾರದಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಿದೆ.

ಉಡುಪಿ ಜಿಲ್ಲಾ ರೈತ ಸಂಘ(ರಿ.)ದ ನೇತೃತ್ವದಲ್ಲಿ ರೈತ ಜಾಗೃತಿಗಾಗಿ ಸಕ್ಕರೆ ಕಾರ್ಖಾನೆಯ ಸದಸ್ಯರು, ವಿವಿಧ ರೈತ ಸಂಘಟನೆಗಳು, ಸಹಕಾರಿ ಕ್ಷೇತ್ರದ ಪ್ರಮುಖರು, ಪಂಚಾಯತ್ ರಾಜ್ ಒಕ್ಕೂಟದ ಪ್ರತಿನಿಧಿಗಳು ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ.

ಈ ಪ್ರಕರಣದಲ್ಲಿ ರೈತರಿಗೆ ನ್ಯಾಯ ಸಿಗುವ ತನಕ ಸತ್ಯಾಗ್ರಹ ಮುಂದುವರಿಯಲಿದೆ. ಅವ್ಯವಹಾರವಾಗಿರುವ ಹಣ ಮರಳಿ ರೈತರಿಗೆ ಸಿಗುವಂತಾಗಬೇಕು, ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸರಕಾರಕ್ಕೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಯಲಿದೆ.

ಈಗಾಗಲೇ ಸತ್ಯಾಗ್ರಹಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪ್ರವೇಶದ್ವಾರ (ಈಗಿನ ಆಲೆಮನೆ) ಹತ್ತಿರ ಪೆಂಡಲ್ ಹಾಕಲಾಗಿದೆ. ಪೂರಕ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಸರಕಾರ ಮಣಿಯುವ ತನಕ ಸತ್ಯಾಗ್ರಹ ಮುಂದುವರಿಯಲಿದೆ. ಈ ಹಿಂದೆ ವಾರಾಹಿ ನೀರಿಗಾಗಿ ನಡೆದ ಸತ್ಯಾಗ್ರಹದ ಮಾದರಿಯಲ್ಲಿಯೇ ಈ ಸತ್ಯಾಗ್ರಹ ನಡೆಯಲಿದೆ. ಅಹೋರಾತ್ರಿ ಎನ್ನದೆ ಸತ್ಯಾಗ್ರಹ ನಡೆಯಲಿದೆ.

ಉಡುಪಿ ಜಿಲ್ಲಾ ರೈತ ಸಂಘ ಇಡೀ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿದ್ದು ಒಂದೊಂದು ದಿನ ಒಂದೊಂದು ವಲಯದ ರೈತರು ಭಾಗವಹಿಸಲಿದ್ದಾರೆ. ಇವರೊಂದಿಗೆ ರೈತ ಮುಖಂಡರು ಸಾಥ್ ನೀಡಲಿದ್ದಾರೆ. ಸಾರ್ವಜನಿಕರು ಕೂಡಾ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ. ಈ ಸತ್ಯಾಗ್ರಹ ರಾಜ್ಯದ ಗಮನ ಸಳೆಯುವುದಂತೂ ಸತ್ಯ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!