spot_img
Wednesday, April 1, 2026
spot_img

ಶಕ್ತಿ ಯೋಜನೆ : ಪುರುಷರಿಗೆ ಸೀಟು ಬಿಟ್ಟುಕೊಡಿ : ಕೆಎಸ್ಆರ್ಟಿಸಿ ಆದೇಶ

ಜನಪ್ರತಿನಿಧಿ (ಬೆಂಗಳೂರು) : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಕಾರಣದಿಂದ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ತುಂಬುತ್ತಿದ್ದು, ಪುರುಷರಿಗೆ ನಿಲ್ಲೂದಕ್ಕೂ ಕಷ್ಟವಾದ ಸನ್ನಿವೇಶಗಳನ್ನು ಎದುರಾಗಿವೆ. ಇದೀಗ ಪುರುಷರಿಗೆ ಸೀಟು ಬಿಟ್ಟುಕೊಡಿ ಎಂದು ಹೇಳುವ ಪರಿಸ್ಥಿತಿ ಸೃಷ್ಟಿಯಾಗಿದೆ. ಅಷ್ಟೇ ಏಕೆ, ಈ ವಿಚಾರವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗ ಅಧಿಕೃತ ಆದೇಶವನ್ನೂ ಹೊರಡಿಸಿದೆ!

ಮಹಿಳಾ ಪ್ರಯಾಣಿಕರೇ ಹೆಚ್ಚು ಇರುವ ಕಾರಣ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಅವರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್ಆರ್​ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.

ಕೆಎಸ್‌ಆರ್‌ಟಿಸಿ ಆದೇಶದಲ್ಲಿ ಏನಿದೆ ?

ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗುತ್ತಿದೆ. ಮೈಸೂರು ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ. ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿರುವುದು ಅಂಕಿ ಅಂಶಗಳಿಂದ ತಿಳಿಬಂದಿದೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಹಲವೆಡೆ ಈ ಹಿಂದೆಯೂ ಕೇಳಿ ಬಂದಿದ್ದವು. ಆದರೆ ಈ ವಿಚಾರದಲ್ಲಿ ಕೆಎಸ್ಆರ್ಟಿಸಿ ಆದೇಶ ಹೊರಡಿಸುವಂತಾಗಿರುವುದು ಇದೇ ಮೊದಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!