spot_img
Wednesday, April 1, 2026
spot_img

ಮಹಾಕುಂಭ ಮೇಳದಿಂದ ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಆದಾಯ : ಯೋಗಿ ಆದಿತ್ಯನಾಥ್‌

ಜನಪ್ರತಿನಿಧಿ (ಲಖನೌ) : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಹರಿದು ಬಂದಿದೆ ಎಂದು  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು(ಶುಕ್ರವಾರ) ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷದ ಶಾಸಕಿ ರಾಗಿಣಿ ಸೋಂಕರ್ ಅವರ ಪ್ರಶ್ನೆಗೆ ಉತ್ತರಿಸಿದ ಯೋಗಿ ಆದಿತ್ಯನಾಥ್, ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ಎಂಟು ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತಂದಿದೆ ಎಂದರು.

“ಪ್ರಧಾನಿ ಮೋದಿಯವರ ನೇತೃತ್ವದಲ್ಲಿ, 10 ವರ್ಷಗಳಲ್ಲಿ, ನಾವು 25 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ತರಲು ಸಾಧ್ಯವಾಯಿತು ಮತ್ತು ಕಳೆದ ಎಂಟು ವರ್ಷಗಳಲ್ಲಿ, ನಮ್ಮ ಸರ್ಕಾರ ಆರು ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಹೊರತಂದಿದೆ. ಇದು ಪ್ರತಿಯೊಂದು ವಲಯದಲ್ಲೂ ಬದಲಾವಣೆಗಳಾಗಿವೆ ಎಂದು ತೋರಿಸುತ್ತದೆ ಎಂದರು.

ದೇಶ ಮತ್ತು ಜಗತ್ತು ಇಂದು ಉತ್ತರ ಪ್ರದೇಶದ ಸಾಮರ್ಥ್ಯವನ್ನು ನೋಡುತ್ತಿದೆ. ಇದು ಮಹಾಕುಂಭದ ಆಯೋಜನೆಯೊಂದಿಗೆ ಸಂಬಂಧ ಹೊಂದಿದೆ. ಮಹಾಕುಂಭವು ಯುಪಿಯ ಆರ್ಥಿಕತೆಯಲ್ಲಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಬೆಳವಣಿಗೆಯನ್ನು ತರಲಿದೆ” ಎಂದು ಸಿಎಂ ಆದಿತ್ಯನಾಥ್ ಹೇಳಿದರು.

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದ ಉಪಕ್ರಮಗಳ ಬಗ್ಗೆಯೂ ಒತ್ತಿ ಹೇಳಿದ ಅವರು, ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಶೇಕಡಾ 20 ರಷ್ಟು ಮಹಿಳೆಯರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

“ನಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡಿದೆ. ಯುಪಿ ಪೊಲೀಸರಲ್ಲಿ, ಶೇಕಡಾ 20 ರಷ್ಟು ನೇಮಕಾತಿಗಳು ಮಹಿಳೆಯರದ್ದಾಗಿವೆ. ಅವರಿಗೆ ಪ್ರತಿಯೊಂದು ವಲಯದಲ್ಲೂ ಉದ್ಯೋಗಾವಕಾಶ ಸಿಕ್ಕಿವೆ” ಎಂದು ಸಿಎಂ ಆದಿತ್ಯನಾಥ್ ಹೇಳಿದರು.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಅಡಿಯಲ್ಲಿ, ರಾಜ್ಯವು ದೇಶದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು 2029 ರ ವೇಳೆಗೆ ದೇಶದ ಅತಿದೊಡ್ಡ ಆರ್ಥಿಕತೆಯಾಗಿ, ಒಂದು ಟ್ರಿಲಿಯನ್ ಯುಎಸ್ ಡಾಲರ್ ಗುರಿಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಉತ್ತರ ಪ್ರದೇಶ ಸಿಎಂ ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!