spot_img
Wednesday, April 1, 2026
spot_img

ಕುಂದಾಪುರ ಪಂಚಾಯತ್ ರಾಜ್ ಇಂಜಿನಿಯರ್ ಕಛೇರಿಯಲ್ಲಿ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಿ-ರಮೇಶ ಶೆಟ್ಟಿ ವಕ್ವಾಡಿ ಆಗ್ರಹ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಕುಂದಾಪುರ ತಾಲೂಕಿನಲ್ಲಿ ಗ್ರಾಮ ಪಂಚಾಯತ್ ಗಳ ಕಾಮಗಾರಿಗಳ ಅನುಷ್ಠಾನವು ವಿಳಂಬ ಆಗುತ್ತಿದ್ದು ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಕಛೇರಿಯು ಬೈಂದೂರಿನಲ್ಲಿ ಇದ್ದು, ಕುಂದಾಪುರ ತಾಲೂಕಿನ ಗ್ರಾಮಪಂಚಾಯತ್ ಗಳು ಸಣ್ಣ ಪುಟ್ಟ ಕಾಮಗಾರಿಗಳಿಗೂ ಬೈಂದೂರಿಗೆ ಅಲೆಯಬೇಕಾದ ಪರಿಸ್ಥಿತಿ ಇದೆ ಎಂದು ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟ (ರಿ.)ದ ಸಂಚಾಲಕ ರಮೇಶ್ ಶೆಟ್ಟಿ ವಕ್ವಾಡಿ ಹೇಳಿದ್ದಾರೆ.

ಪಿ‌ಆರ್ ಇಡಿ, ವಾಟರ್ ಸಪ್ಲೈ ಹೀಗೇ ಹಲವಾರು ಡಿವಿಜನ್ ಗಳಿಗೆ ಅಲೆಯುವ ಪರಿಸ್ಥಿತಿಯಿಂದ ಕಾಮಗಾರಿಗಳನ್ನು ನಿರ್ವಹಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ.
ಆದಷ್ಟು ಬೇಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಕುಂದಾಪುರ ಕಛೇರಿಯಲ್ಲಿಯೇ ಇಂಜಿನಿಯರ್ ಗಳು ಸದಾ ಲಭ್ಯವಿರುವಂತೆ ಮಾಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.

ಗ್ರಾಮ ಮಟ್ಟದ ಕಾಮಗಾರಿಗಳಿಗೆ ಚುರುಕು ಮುಟ್ಟಿಸುವ ಕೆಲಸವನ್ನು ಶಾಸಕರು ಹಾಗೂ ಸರಕಾರ ಮಾಡಬೇಕು. ಇದನ್ನು ಈಗಾಗಲೇ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು, ಆದಷ್ಟು ಕೂಡಲೇ ಕುಂದಾಪುರ ತಾಲೂಕಿನ ಗ್ರಾಮಪಂಚಾಯತ್ ಗಳ ಕಷ್ಟಕ್ಕೆ ಪರಿಹಾರವನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!