spot_img
Thursday, April 2, 2026
spot_img

ಜಮೀಯತುಲ್ ಫಲಾಹ್ ಕುಂದಾಪುರ: ಪ್ರೇರಣಾ ಶಿಬಿರ

ಕುಂದಾಪುರ: ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಜೀವನ ಕೌಶಲ್ಯ ಕಲಿಸಬೇಕು ಇದರಿಂದಾಗಿ ಮಕ್ಕಳ ಮುಂದಿನ ಭವಿಷ್ಯಕ್ಕೆ ಬುನಾದಿಯಾಗಲಿದೆ, ಅಲ್ಲದೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೆಲವೊಂದು ವಿದ್ಯಾಮಾನಗಳಿಂದಾಗಿ ಮಕ್ಕಳು ದುಶ್ಚಟಗಳ ದಾಸರಾಗಿ, ಮಾದಕ ವಸ್ತುಗಳ ವ್ಯಸನಿಗಳಾಗಿ ದಾರಿತಪ್ಪುತ್ತಿದ್ದಾರೆ. ಈ ಬಗ್ಗೆ ಪೋಷಕರು ಜಾಗೃತರಾಗಿ ತಮ್ಮ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ ಎಂದು ಜಮೀಯತುಲ್ ಫಲಾಹ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಜನಾಬ್ ಕೋಟ ಇಬ್ರಾಹಿಂ ಸಾಹೇಬ್ ಹೇಳಿದರು.

ಅವರು ಕುಂದಾಪುರದ ಜಾಮಿಯಾ ಮಸೀದಿಯ ಹಾಲ್ ನಲ್ಲಿ ನಡೆದ ಜಮೀಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಪ್ರೇರಣಾ ಶಿಬಿರದ ಅಧ್ಯಕ್ಷತೆ ವಹಿಸಿ ಸುಮಾರು ೪೦ ವಿದ್ಯಾರ್ಥಿಗಳಿಗೆ ೧,೨೦,೦೦೦ ದಷ್ಟು ಕಲಿಕಾ ಪ್ರೋತ್ಸಾಹ ಧನ ವಿತರಿಸಿ ಮಾತನಾಡಿದರು.

ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯು ನಡೆದು ಬಂದ ದಾರಿ ಹಾಗೂ ಇಂದಿನ ವಿದ್ಯಾರ್ಥಿಗಳಿಗೆ ಸಾಮಾಜಿಕ ಬದ್ಧತೆಯ ಕುರಿತು ತಿಳಿಸಿದರು.

ಮೌಲಾನಾ ಫಝಲ್ ಮೊಹಮ್ಮದ್ ಶಿಬಿರ ಉದ್ಘಾಟಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರ ಜಾಮಿಯಾ ಮಸೀದಿ ಅಧ್ಯಕ್ಷರಾದ ವಸೀಮ್ ಬಾಷಾ ಸಾಹೇಬ್, ಸಮಾಜ ಸೇವಕರು ಹಾಗೂ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ನಾಸೀರ್, ಕೋಶಾಧಿಕಾರಿ ಶೇಕ್ ಅಬು ಮೊಹಮ್ಮದ್, ತಾಲೂಕು ಘಟಕದ ಉಪಾಧ್ಯಕ್ಷರುಗಳಾದ ಜಿ. ಪಿ ಮೊಹಮ್ಮದ್, ಅಬ್ದುಲ್ ಹಮೀದ್ ಗಂಗೊಳ್ಳಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ಮುಜಾವರ್ ಅಬು ಮೊಹಮ್ಮದ್ ಸ್ವಾಗತಿಸಿ, ವಂದಿಸಿದರು.
ರಿಯಾಜ್ ಕೋಡಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!