spot_img
Monday, February 16, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣ : ನಾಲ್ಕನೇ ದಿನಕ್ಕೆ ಮುಂದುವರಿದ ನ್ಯಾಯಾಗ್ರಹ

ಜನಪ್ರತಿನಿಧಿ (ಬ್ರಹ್ಮಾವರ) : ಸಕ್ಕರೆ ಕಾರ್ಖಾನೆಯ ಪ್ರವೇಶ ರಸ್ತೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬ ನೀತಿಯ ವಿರುದ್ಧ ʼಅನ್ನದಾತರ ನ್ಯಾಯಾಗ್ರಹʼ ಇಂದು(ಮಂಗಳವಾರ) ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಉಡುಪಿ ಜಿಲ್ಲಾ ರೈತ ಸಂಘದ ಬೀಜಾಡಿ ವಲಯದ ಪ್ರತಿನಿಧಿಗಳು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ತನಿಖೆಯನ್ನು ಶೀಘ್ರವಾಗಿ ಪೂರೈಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ ಧರಣಿ ಆರಂಭಿಸಿದ್ದಾರೆ.

ನ್ಯಾಯಾಗ್ರಹದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ, ಸದಾನಂದ ಶೆಟ್ಟಿ ಕೆದೂರು, ಮಲ್ಯಾಡಿ ಶಿವರಾಮ ಶೆಟ್ಟಿ, ರಮೇಶ್ ಶೆಟ್ಟಿ ವಕ್ವಾಡಿ, ರಾಮಚಂದ್ರ ನಾವಡ ಕಾಳಾವರ, ಭರತ್ ಕಾಳಾವರ ಸೇರಿ ರೈತ ಪರ ಮುಖಂಡರು, ರೈತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!