spot_img
Thursday, April 2, 2026
spot_img

ಮಣಿಪಾಲ ಜ್ಞಾನಸುಧಾ: ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಜನಪ್ರತಿನಿಧಿ ವಾರ್ತೆ] ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಕಾರ್ಯಾಗಾರ ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಡಾ.ದಯಾನಂದ ಪೈ, ಉಡುಪಿ ಜಿಲ್ಲಾ ಗಣಕ ವಿಜ್ಞಾನ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜ್ಞಾನೇಶ್ ಕೋಟ್ಯಾನ್, ಕಾರ್ಯದರ್ಶಿ ಶ್ರೀಮತಿ ಶಕುಂತಲಾ ರಾಜೇಶ್ ಪಾಲನ್, ಖಜಾಂಜಿ ಶ್ರೀಮತಿ ಬಿನು ಜಯಚಂದ್ರನ್ ಉಪಸ್ಥಿತರಿದ್ದರು.

ಎಸ್.ಎಮ್.ಎಸ್. ಪದವಿ ಪೂರ್ವಕಾಲೇಜು ಬ್ರಹ್ಮಾವರದ ಗಣಕ ಶಾಸ್ತ್ರ ಉಪನ್ಯಾಸಕರಾದ ಸಂತೋಷ್ ನೀಲಾವರ ಹಾಗೂ ಎಮ್.ಐ.ಟಿ. ಮಣಿಪಾಲದ ಐ.ಸಿ.ಟಿ. ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ನಿಶಾ ಪಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!