spot_img
Thursday, April 2, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ : ಐದನೇ ದಿನಕ್ಕೆ ಕಾಲಿಟ್ಟ ನ್ಯಾಯಾಗ್ರಹ ಧರಣಿ

ಜನಪ್ರತಿನಿಧಿ (ಬ್ರಹ್ಮಾವರ) : ಸಕ್ಕರೆ ಕಾರ್ಖಾನೆಯ ಪ್ರವೇಶ ರಸ್ತೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬ ನೀತಿಯ ವಿರುದ್ಧ ʼಅನ್ನದಾತರ ನ್ಯಾಯಾಗ್ರಹʼ ಇಂದು(ಬುಧವಾರ) ಐದನೇ ದಿನಕ್ಕೆ ಮುಂದಡಿಯಿಟ್ಟಿದೆ.

ಹಗರಣ ನಡೆದಿದೆ ಎಂಬುವುದಕ್ಕೆ ಪೂರಕ ದಾಖಲೆಗಳು ಇದ್ದರೂ ತನಿಖೆ ಚುರುಕುಗೊಳಿಸದೆ ವಿಳಂಬ ನೀತಿ ಅನುಸರಿಸುತ್ತಿರುವುದರ ಹಿಂದೆ ಪಟ್ಟಭದ್ರ ಹಿತಾಸಕ್ತಿಯ ಒತ್ತಡ ಇದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ರೈತ ಸಂಘ ಹಾಗೂ ಇತರ ಸಂಘಟನೆಗಳು ಸತ್ಯಾಗ್ರಹ ನಿರತವಾಗಿವೆ.

ಇಂದು, ಉಡುಪಿ ಜಿಲ್ಲಾ ರೈತ ಸಂಘದ ತ್ರಾಸಿ ವಲಯದ ಪ್ರತಿನಿಧಿಗಳು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ತನಿಖೆಯನ್ನು ಶೀಘ್ರವಾಗಿ ಪೂರೈಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ ಧರಣಿ ಆರಂಭಿಸಿದ್ದಾರೆ.

ನ್ಯಾಯಾಗ್ರಹದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ, ತ್ರಾಸಿ ವಲಯದ ಮುಖಂಡ ಶರತ್‌ ಶೆಟ್ಟಿ ಬಾಳಿಕೆರೆ ಸೇರಿ ರೈತ ಪರ ಮುಖಂಡರು, ರೈತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!