spot_img
Monday, May 18, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ : ರೈತ ಸಂಘದ ಹೋರಾಟಕ್ಕೆ ಮಾಜಿ ಶಾಸಕ ಸುಕುಮಾರ್‌ ಶೆಟ್ಟಿ ಬೆಂಬಲ

ಜನಪ್ರತಿನಿಧಿ (ಬ್ರಹ್ಮಾವರ) : ಸಕ್ಕರೆ ಕಾರ್ಖಾನೆಯ ಪ್ರವೇಶ ರಸ್ತೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ʼಅನ್ನದಾತರ ನ್ಯಾಯಾಗ್ರಹʼ ಇಂದು(ಬುಧವಾರ) ಐದನೇ ದಿನಕ್ಕೆ ಮುಂದಡಿಯಿಟ್ಟಿದೆ.

ಉಡುಪಿ ಜಿಲ್ಲೆಯ ರೈತ ಸಂಘ ಮತ್ತು ವಿವಿಧ ಸಂಘಟನೆಗಳು ಒಟ್ಟಾಗಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ವಿರುದ್ಧ ಶೀಘ್ರದಲ್ಲಿ ತನಿಖೆ ಪೂರೈಸಿ ತಪ್ಪಿತಸ್ಥ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ನಿರ್ದೇಶಕರುಗಳು ಮತ್ತು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸಹಕಾರಿ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ನಡೆಸುತ್ತಿರುವ ಹೋರಾಟದಲ್ಲಿ ಇಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ  ಹಾಗೂ ಕಾಂಗ್ರೆಸ್‌ ಮುಖಂಡ ಬಿ. ಎಂ ಸುಕುಮಾರ್‌ ಶೆಟ್ಟಿ ಭಾಗಿಯಾಗಿ ಬೆಂಬಲ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ನ್ಯಾಯಾಗ್ರಹದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ರೈತ ಸಂಘದ ತ್ರಾಸಿ ವಲಯದ ರೈತ ಪರ ಮುಖಂಡರು, ರೈತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!