spot_img
Friday, April 3, 2026
spot_img

ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ | ಕುಂಭಮೇಳದ ನಿರ್ವಹಣೆ ಬಗ್ಗೆ ಡಿಕೆಶಿ ಮೆಚ್ಚುಗೆ | ಸ್ವಪಕ್ಷೀಯರ ಟೀಕೆಗೆ ಡಿಕೆಶಿ ತಿರುಗೇಟು

ಜನಪ್ರತಿನಿಧಿ (ಬೆಂಗಳೂರು) : ಕುಂಭಮೇಳಕ್ಕೆ ಭೇಟಿ ನೀಡಿದ್ದು, ಈಗ ಶಿವರಾತ್ರಿ ಅಂಗವಾಗಿ ಇಶಾ ಫೌಂಡೇಶನ್ ಗೆ ಭೇಟಿ ನೀಡುತ್ತಿರುವುದರ ಬಗ್ಗೆ ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೆನೆ ಎಂದು ಡಿಕೆ ಶಿವಕುಮಾರ್ ಟೀಕಾಕಾರರಿಗೆ ಖಡಕ್ ತಿರುಗೇಟು ನೀಡಿದ್ದಾರೆ.

ಸದಾಶಿವ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಕುಂಭಮೇಳದಲ್ಲಿ ಭಾಗಿಯಾಗಿದ್ದು ನನ್ನ ನಂಬಿಕೆ, ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ. ಆದರೆ ಎಲ್ಲ ಧರ್ಮದ ಬಗ್ಗೆ ಗೌರವ ಇಟ್ಟಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಕುಂಭಮೇಳದ ಆಯೋಜನೆ ಬಗ್ಗೆಯೂ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಕುಂಭ ಮೇಳದಲ್ಲಿ ಉತ್ತಮ ಅನುಭವ ಆಗಿದೆ. ತುಂಬಾ ಉತ್ತಮವಾಗಿ ನಿರ್ವಹಣೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕುಂಭ ಮೇಳ ವಿಷಯವನ್ನು ರಾಜಕೀಯಗೊಳಿಸುವುದನ್ನು ವಿರೋಧಿಸುವ ಮೂಲಕ ತಮ್ಮದೇ ಪಕ್ಷದವರಿಗೆ ತಿರುಗೇಟು ಕೊಟ್ಟಿದ್ದಾರೆ.

ಕುಂಭಮೇಳದಲ್ಲಿ ಭಾಗಿಯಾಗಿದ್ದಕ್ಕಾಗಿ ನಾನು ಬಿಜೆಪಿಗೆ ಹತ್ತಿರ ಆಗುತ್ತಿದ್ದೇನೆ ಎಂದು ಕೆಲವು ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ನಾನು ಹುಟ್ಟು ಕಾಂಗ್ರೆಸ್ಸಿಗ. ಕುಂಭ ಮೇಳಕ್ಕೆ ನಾನು ಭೇಟಿ ಕೊಟ್ಟಿರುವುದು ನನ್ನ ನಂಬಿಕೆ ಇಂತಹ ಊಹಾಪೋಹಗಳು ನನ್ನ ಹತ್ತಿರವೂ ಸುಳಿಯುವುದು ಬೇಡ, ಬಿಜೆಪಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ಹೇಳಿದ್ದಾರೆ.

ದೆಹಲಿಗೆ ಭೇಟಿ ನೀಡಿದ ಸಂದರ್ಶನದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಆಗಿದ್ದೇನೆ. ಪಕ್ಷದ ಕಚೇರಿ ನಮಗೆ ದೇವಸ್ಥಾನ ಇದ್ದ ಹಾಗೆ. ಕಾಂಗ್ರೆಸ್ ಕಚೇರಿಗೆ ಹೋಗದೆ ಬಿಜೆಪಿ ಕಚೇರಿ, ಅಥವಾ ಕೇಶವ ಕೃಪಕ್ಕೆ ಹೋಗಲೇ? ಎಂದು ಪ್ರಶ್ನಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!